ಸೋಂಕು ತಡೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಸಭೆ

ಕೋಲಾರ,ಏ.೨೯: ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರ ಸಭೆಯನ್ನು ಗ್ರಾಪಂ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸರ್ವ ಸದಸ್ಯರ ಸಮ್ಮುಖದಲ್ಲಿ ತಹಸೀಲ್ಥಾರ್ ಸುಜಾತ ನೇತೃತ್ವದಲ್ಲಿ ಕೊರೊನಾ ವೈರಸ್ತ ಡೆಯುವ ಬಗ್ಗೆ ಸಭೆ ನಡೆಯಿತು.
ಗ್ರಾಪಂ ಅವರಣದಲ್ಲಿ ಗ್ರಾಪಂ ಅಧಿಕಾರಿಗಳ ಹಾಗೂ ಅಧ್ಯಕ್ಷರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅನೇಕ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಗ್ರಾಮಕ್ಕೆ ಹೊರಗಿನಿಂದ ಯಾರೇ ಹೊಸಬರು ಬಂದ ಹಿನ್ನಲೆಯಲ್ಲಿ ಅಂತಹವರನ್ನು ಕಂಡು ಹಿಡಿದು ಆರೋಗ್ಯ ಇಲಾಖೆಯ ಗಮನಕ್ಕೆ ತಂದು ಆರೋಗ್ಯ ಪರೀಕ್ಷೆಗೆ ಒಳಪಡಿಸಲು ಜನಪ್ರತಿನಿಧಿಗಳು ಹಾಗೂ ಆಶಾ ಕಾರ್ಯಕರ್ತೆಯರು ಶ್ರಮ ವಹಿಸಬೇಕೆಂದು ತಹಸೀಲ್ಥಾರ್ ಸುಜಾತ ಅವರು ಸೂಚನೆ ನೀಡಿದರು.
ಕೊರೊನಾ ಮಹಾಮಾರಿ ವೈರಸ್ ಹರಡದಂತೆ ತಡೆಯಲು ಆಶಾ ಕಾರ್ಯಕರ್ತೆಯರ ಪಾತ್ರ ಬಹು ಮುಖ್ಯವಾಗಿದ್ದು, ತಮ್ಮ ವ್ಯಾಪ್ತಿಯ ಜನತೆಯನ್ನು ಗಮನಿಸಿ, ನಗರದಿಂದ ಬರುವ ಜನರ ಮಾಹಿತಿಯನ್ನು ಶೀಘ್ರವಾಗಿ ಪಡೆದುಕೊಂಡು ಚಿಕಿತ್ಸೆ ನೀಡಲು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಮತ ಗಣೇಶ್, ಉಪಾಧ್ಯಕ್ಷ ನಂದೀಶ್, ಗ್ರಾಪಂ ಅಧಿಕಾರಿ ಭಾಸ್ಕರ್, ಕಾರ್ಯದರ್ಶಿ ವೆಂಕಟೇಶ್ ಹಾಗೂ ಗ್ರಾಪಂ
ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.