ಸೋಂಕು ತಡೆಗೆ ಲಾಕ್ ಡೌನ್ ಗೆ ಎಚ್ ಡಿಕೆ ಆಗ್ರಹ

ಬೆಂಗಳೂರು ,ಏ 20-ಕೊರೊನಾ ಸೋಂಕು ಹೆಚ್ವಖವಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಜೀವನ ಅಮೂಲ್ಯ ವಾಗಿದ್ದು ಲಾಕ್ ಡೌನ್ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ದೂರುವುದಿಲ್ಲ. ಈ ಹಿಂದೆಯೂ ಲಾಕ್ ಡೌನ್ ಮಾಡುವಂತೆ ಸಲಹೆ ನೀಡಿದ್ದೆ. ಈಗಲೂ ಲಾಕ್ ಡೌನ್ ಗೆ ಸಲಹೆ ಮಾಡುತ್ತೇನೆ ಎಂದರು.
ಆರ್ಥಿಕ ಪರಿಸ್ಥಿತಿ ನೋಡುತ್ತಾ ಕುಳಿತರೆ ಕಠಿಣ ಪರಿಸ್ಥಿತಿ ಎದುರಾಗಲಿದೆ. ಸೋಂಕು ಹೆಚ್ಷುರುವ ಬೆಂಗಳೂರು, ಕಲಬುರಗಿ, ಮೈಸೂರು ಮತ್ತು ಬೆಳಗಾವಿ ಭಾಗಗಳಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಪ್ರತಿಪಾದಿಸಿದರು.