ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಜಾರಿ: ಸಿಎಂ

ಬೆಂಗಳೂರು, ಡಿ.೩- ಒಮಿಕ್ರಾನ್ ಸೋಂಕಿನ ಬಗ್ಗೆ ತಜ್ಞರ ಜೊತೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.
ಪತ್ತೆಯಾಗಿರುವ ಒಮಿಕ್ರಾನ್ ಕುರಿತು ಸೋಂಕಿತರ ಸಂಪರ್ಕದಲ್ಲಿರುವ ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅವರ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಜ್ಞರ ಜತೆ ಸುದೀರ್ಘ ಸಮಾಲೋಚನೆ ನಡೆಸಿ. ಇದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಅವರ ಪೈಕಿ ಒಬ್ಬರು ವಿದೇಶದಿಂದ ಬಂದವರು ಮತ್ತೊಬ್ಬರು ಸ್ಥಳೀಯರು. ಈ ಹಿನ್ನೆಲೆಯಲ್ಲಿ ಯಾವ ರೀತಿ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಯಾವ ರೀತಿ ನಿಭಾಯಿಸಬೇಕು ಇದು ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವ ಕುರಿತಂತೆ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.
ಜಗತ್ತಿನ ಬೇರೆಬೇರೆ ದೇಶಗಳಲ್ಲಿ ಪತ್ತೆಯಾಗಿರುವ ಹೊಸ ಮಾದರಿಯ ರೂಪಾಂತರಗಳಿಗೆ ವೈದ್ಯಕೀಯ ಮಾರ್ಗಸೂಚಿಗಳನ್ನು ಅನುಸರಿಸುತ್ತಾರೆ ಎನ್ನುವ ಕುರಿತು ವಿವರ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.