ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ : ಸಚಿವ ಪಾಟೀಲ

ಗದಗ ಏ. 30: ರಾಷ್ಟ್ರಾದ್ಯಂತ ಕೋವಿಡ್-19 ಎರಡನೇ ಅಲೆ ತೀವ್ರವಾಗಿ ಮುನ್ನುಗುತ್ತಿದ್ದು ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು ಸಾರ್ವಜನಿಕರು ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದರು.

ಜಿಲ್ಲಾಡಳಿತ ಭವನದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಜರುಗಿದ ವಿಡೀಯೊ ಸಂವಾದ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಜಾರಿಗೊಳಿಸಿದ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದ್ದು ಈ ಮಾರ್ಗಸೂಚಿಗಳ ಜಾರಿಗಾಗಿ ಜಿಲ್ಲಾಡಳಿತಕ್ಕೆ ಮುಕ್ತ ಅಧಿಕಾರ ನೀಡಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳನ್ನು ಉಲ್ಲಂಘಿಸದೆ ಸೋಂಕು ನಿಯಂತ್ರಣಕ್ಕೆ ಅಗತ್ಯದ ಸಹಕಾರ ನೀಡುವಂತೆ ತಿಳಿಸಿದರು.ರೆಮ್ಡಿಸಿವರ ಲಸಿಕೆ ಅವಶ್ಯವಿದ್ದವರಿಗೆ ಮಾತ್ರ ನೀಡಬೇಕು.

ಜಿಲ್ಲೆಯಲ್ಲಿ 650 ಸೋಂಕಿತರ ಸಕ್ರಿಯ ಪ್ರಕರಣಗಳಿದ್ದು ಇದರಲ್ಲಿ 450 ಹೋಮ ಐಸೋಲೆಷನ್, 72 ಖಾಸಗಿ ಆಸ್ಪತ್ರೆಗಳಲ್ಲಿ, 128 ಸೋಂಕಿತರು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲ 500 ಹಾಸಿಗೆಗಳ ಸಾಮಥ್ರ್ಯವಿದ್ದು ಅಗತ್ಯವಿದ್ದಲ್ಲಿ 750 ಹಾಸಿಗೆಗಳ ಕೋವಿಡ್ ಕೇರ ಸೆಂಟರ ಆರಂಭಿಸಲು ಜಿಲ್ಲಾಡಳಿತ ಸನ್ನದ್ಧವಾಗಿರುತ್ತದೆ ಎಂದರು. ಅಲ್ಲದೆ 150 ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳ ಲಭ್ಯತೆಯನ್ನು ನಿರೀಕ್ಷಿಸಲಾಗಿದೆ ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆಗಳ ಕೊರತೆ ಇಲ್ಲವೆಂದು ತಿಳಿಸಿದರು.

ಜಿಮ್ಸ ಆಸ್ಪತ್ರೆಯಲ್ಲಿ ಆಕ್ಸಿಜನ ಉತ್ಪಾದನಾ ಯಂತ್ರ ಅಗತ್ಯವಿದ್ದು ಖರೀದಿಗಾಗಿ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ಮಾತನಾಡುವದಾಗಿ ತಿಳಿಸಿದರು. ಜಿಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ 13 ಕೆ.ಎಲ್ ಆಕ್ಸಿಜನ್ ಪೂರೈಕೆಯ ಟ್ಯಾಂಕ ನಿರ್ಮಿಸಲಾಗಿದ್ದು ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಲಭ್ಯವಿದೆ ಎಂದರು.

ಜಿಲ್ಲೆಯ ಸಾರ್ವಜನಿಕರು, ವ್ಯಾಪಾರಸ್ಥರು ಸೋಂಕು ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವದು, ಕಡ್ಡಾಯ ಮಾಸ್ಕ ಧಾರಣೆ ಹಾಗೂ ಶುಚಿತ್ವ ಕಾಯ್ದುಕೊಳ್ಳುವಂತೆ ಸಚಿವರು ಮನವಿ ಮಾಡಿದರು.

ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿ.ಪಂ. ಸಿ.ಇ.ಓ. ಭರತ ಎಸ್., ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ. ಹಾಜರಿದ್ದರು.