ಸೋಂಕು ನಿಯಂತ್ರಣವಾದರೆ ಮಾತ್ರ ಪರೀಕ್ಷೆ

ಬೆಳಗಾವಿ, ಜೂ ೪- ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣವಾಗದಿದ್ದರೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮಾಡುವುದಿಲ್ಲ. ಕೊರೊನಾ ನಿಯಂತ್ರಣವಾದರೆ ಮಾತ್ರ ಪರೀಕ್ಷೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂದೆ ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಪರೀಕ್ಷೆ ನಡೆಸುತ್ತೇವೆ ಇಲ್ಲವಾದರೆ ಇಲ್ಲ ಎಂದು ಮತ್ತೆ ಪುನರುಚ್ಚರಿಸಿದರು.