ಸೋಂಕು ನಿಯಂತ್ರಿಸಲು ಸರ್ಕಾರ ವಿಫಲ

ಬೀದರ್,ಏ.೧೬- ಕೊರೊನಾ ಸೋಂಕನ್ನು ನಿಯಂತ್ರಿಸಲು ವಿಫಲವಾಗಿರುವ ರಾಜ್ಯಸರ್ಕಾರ ತನ್ನ ತಪ್ಪನ್ನು ಮರೆಮಾಚಲು ಸರ್ವ ಪಕ್ಷಗಳ ಸಭೆಯನ್ನು ಕರೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೀದರ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಬಿಜೆಪಿ ಸರ್ಕಾರಕ್ಕೆ ಜನರ ಜೀವನದ ಬಗ್ಗೆ ಕಾಳಜಿಯೇ ಇಲ್ಲ. ಸೋಂಕು ಹೆಚ್ಚಾಗುತ್ತಿದ್ದರೂ ನಿಯಂತ್ರಣದ ಕ್ರಮದ ಬಗ್ಗೆ ಬಿಗಿಕ್ರಮಗಳನ್ನು ಜಾರಿ ಮಾಡುತ್ತಿಲ್ಲ. ಸೋಂಕು ತಡೆಯಲು ಸರ್ಕಾರ ವಿಫಲವಾಗಿದೆ ಎಂದರು.
ಕೊರೊನಾ ತಡೆಯಲು ವಿಫಲವಾಗಿರುವ ತನ್ನ ತಪ್ಪನ್ನು ಮರೆಮಾಚಲು ಸರ್ವಪಕ್ಷ ಸಭೆಯನ್ನು ಕರೆದಿದೆ. ಸರ್ವಪಕ್ಷ ಸಭೆಯಲ್ಲಿ ಏನು ಚರ್ಚೆ ಮಾಡುತ್ತಾರೋ ನೋಡೋಣ ಎಂದರು.
ನಕಲಿ ಔಷಧಿ
ರಾಜ್ಯದಲ್ಲಿ ನಕಲಿ ಔಷಧಿ ಹಾವಳಿ ಶುರು ಆಗಿದೆ. ೧೦ ಸಾವಿರ ರೂ.ಗೆ ನಕಲಿ ಚುಚ್ಚುಮದ್ದು ಮಾರಾಟವಾಗುತ್ತಿದೆ ಎಂದು ದೂರಿದರು.