ಸೋಂಕು ಪತ್ತೆಗೆ 37 ಕೋಟಿ ಪರೀಕ್ಷೆ

ಬೆಂಗಳೂರು/ ನವದೆಹಲಿ .ಜೂ. ೧೦- ದೇಶದಲ್ಲಿ ಇದುವರೆಗೆ ೩೭ ಕೋಟಿ ಹೆಚ್ಚು ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ.
ಈ ಮೂಲಕ ಸೋಂಕು ಪತ್ರೆ ಪರೀಕ್ಷೆಯಲ್ಲಿ ಅಮೆರಿಕವನ್ನು ಭಾರತ ಹಿಂದಿಕ್ಕಿದೆ.
ಈ ಕುರಿತು ಸ್ವೀಟ್ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ದೇಶದಲ್ಲಿ ಕಳೆದ ೩ ತಿಂಗಳ ಅವಧಿಯಲ್ಲಿ ೧೩ ಕೋಟಿಗೂ ಹೆಚ್ಚು ಜನರಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ
ಅಮೆರಿಕದ ಒಟ್ಟಾರೆ ಜನಸಂಖ್ಯೆ ಗಿಂತ ಹೆಚ್ಚಾಗಿ ಭಾರತದಲ್ಲಿ ಕೊರೋನೋ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸರಾಸರಿ ಪ್ರತಿದಿನ ೨೦ ಲಕ್ಷಕ್ಕೂ ಹೆಚ್ಚು ಜನರಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಕೂಡ ಅವರು ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ

೩ ಕೋಟಿಗೂ ಅಧಿಕ:
ರಾಜ್ಯದಲ್ಲಿಯೂ ೩ ಕೋಟಿಗೂ ಅಧಿಕ ಜನರಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜದಲ್ಲಿ ನನ್ನ ಸಂಜೆಯತನಕ ೩,೧೦,೨೬, ೧೮೯ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ.