ಸೋಂಕು ಶೇ.12ರಷ್ಟು ಇಳಿಕೆ

ನವದೆಹಲಿ, ಜೂ.೭- ದೇಶದಲ್ಲಿ ಕಳೆದ ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅತಿ ಕಡಿಮೆ ಪ್ರಮಾಣದ ಕೊರೊನಾ ಸೋಂಕು ಸಂಖ್ಯೆ ದಾಖಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ದೇಶದಲ್ಲಿ ನೆನ್ನೆ ದಾಖಲಾಗಿದ್ದ ಒಟ್ಟಾರೆ ಸೋಂಕಿನ ಪೈಕಿ ಇಂದು ಶೇಕಡಾ ೧೨ರಷ್ಟು ಕಡಿಮೆಯಾಗಿದೆ. ಈ ಮೂಲಕ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆ ಕಾಣುತ್ತಿದೆ.
ದೇಶದಲ್ಲಿ ಗರಿಷ್ಠ ಪ್ರಮಾಣ ೪.೧೪ ಲಕ್ಷ ಮಂದಿಗೆ ಒಂದೇ ದಿನ ಸೋಂಕು ಕಾಣಿಸಿಕೊಳ್ಳುವ ಮೂಲಕ ಕೇಂದ್ರ-ರಾಜ್ಯ ಸರ್ಕಾರಗಳು ಸೇರಿದಂತೆ ಜನರನ್ನು ಬೆಚ್ಚಿ ಬೀಳಿಸಿತ್ತು. ಜೊತೆಗೆ ಹಲವು ದಿನಗಳ ಕಾಲ ೪ ಲಕ್ಷ ದಾಟಿ ಪ್ರತಿದಿನದ ಸೋಂಕು ದಾಖಲಾಗುತ್ತಿತ್ತು. ಇದರಿಂದ ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿತ್ತು.
ಕಳೆದ ಹಲವು ದಿನಗಳಿಂದ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದ್ದು ಚೇತರಿಕೆ ಅಧಿಕವಾಗುತ್ತಿದೆ ಇದರಿಂದ ಸಹಜವಾಗಿಯೇ ಸಕ್ರಿಯ ಪ್ರಕರಣ ಕುಸಿತ ಕಂಡಿದೆ.
ದೇಶದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ರೀತಿಯ ಸೋಂಕು ಮತ್ತು ಸಾವಿನ ಸಂಖ್ಯೆ ದಾಖಲಾಗುತ್ತಿದ್ದ ಮಹಾರಾಷ್ಟ್ರ ದೆಹಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಗಣನೀಯವಾಗಿ ಕುಸಿತ ಕಂಡಿರುವುದು ಚೇತರಿಕೆ ಪ್ರಮಾಣ ಅಧಿಕವಾಗಿದೆ ಕಾರಣವಾಗಿದೆ

೧ ಲಕ್ಷ ಸೋಂಕು ದೃಡ:
ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧,೦೦,೬೩೬ ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.೨,೪೨೭ ಮಂದಿ ಸಾವನ್ನಪ್ಪಿದ್ದು ೧,೭೪,೩೯೯ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇಂದು ಬೆಳಗ್ಗೆ ೮ ಗಂಟೆಯ ತನಕ ಹೊಸದಾಗಿ ದಾಖಲಾಗಿರುವ ಸೋಂಕು ಸಂಖ್ಯೆ ಸೇರಿದಂತೆ ದೇಶದಲ್ಲಿ ಇಲ್ಲಿಯತನಕ ಒಟ್ಟಾರೆ ಕೊರೋನಾ ಸೋಂಕಿನ ಸಂಖ್ಯೆ ೨,೮೯,೦೯,೯೭೫ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾದ ಅವರ ಸಂಖ್ಯೆ ದೇಶದಲ್ಲಿ ೨,೭೧,೫೯,೧೮೦ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇಲ್ಲಿಯತನಕ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೩,೪೯,೧೮೬ ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ

ಸಕ್ರಿಯ ಪ್ರಕರಣ ಕಸಿತ:
ಮಹಾರಾಷ್ಟ್ರ ದೆಹಲಿ ಕರ್ನಾಟಕ ತಮಿಳುನಾಡು ಆಂಧ್ರಪ್ರದೇಶ ಕೇರಳ ಚಂದಿಗಡ, ಚತ್ತೀಸ್ಗಡ ರಾಜಸ್ಥಾನ ಪಶ್ಚಿಮಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಸಂಖ್ಯೆ ನಿತ್ಯ ಕಡಿಮೆಯಾಗಿ ಚೇತರಿಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದೆ.
ದೇಶದಲ್ಲಿ ಸದ್ಯ ೧೪,೦೧,೬೦೯ ಮಂದಿಯಲ್ಲಿ ಸಕ್ರಿಯ ಪ್ರಕರಣಗಳಿವೆ ಈ ಸಂಖ್ಯೆ ಕಳೆದ ಹಲವು ದಿನಗಳಿಂದ ಗಣನೀಯವಾಗಿ ಕುಸಿತ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಇಲ್ಲಿಯತನಕ ೨೩,೨೭,೮೬,೪೮೨ ಮಂದಿಗೆ ಲಸಿಕೆ ಹಾಕಲಾಗಿದೆ ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪರೀಕ್ಷೆ ಪ್ರಮಾಣ ಅಧಿಕ
ದೇಶದಲ್ಲಿ ಕಳೆದ ಹಲವು ದಿನಗಳಿಂದ ಪ್ರತಿನಿತ್ಯ ಸರಾಸರಿ ೨೦ ಲಕ್ಷಕ್ಕೂ ಹೆಚ್ಚಿನ ಮಂದಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ- ಐಸಿಎಂಆರ್ ತಿಳಿಸಿದೆ.
ನಿನ್ನೆ ದೇಶದಲ್ಲಿ ೧೫,೮೭,೫೮೯ ಮಂದಿಗೆ ಪರೀಕ್ಷೆ ನಡೆಸಲಾಗಿದ್ದು ಇದುವರೆಗೂ ಒಟ್ಟಾರೆಯಾಗಿ ದೇಶದಲ್ಲಿ ೩೬,೬೩,೩೪,೧೧೧ ಮಂದಿಗೆ ಪರೀಕ್ಷೆ ನಡೆಸಿರುವುದಾಗಿ ತಿಳಿಸಿದೆ