ಸೋಂಕು, ಸಾವು ಇಳಿಕೆ

ನವದೆಹಲಿ,ಜು.೨೬- ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆ ಕಂಡಿದ್ದು ಚೇತರಿಕೆ ಅಧಿಕವಾಗಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧೪,೮೩೦ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ೧೮,೧೫೯ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದೇ ಅವಧಿಯಲ್ಲಿ ೩೬ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ ಸದ್ಯ ಈ ಸಂಖ್ಯೆ ೧,೪೭,೫೧೨ ಮಂದಿಯಲ್ಲಿ ಇದೆ. ಜೊತೆಗೆ ದಿನದ ಪಾಸಿಟಿವಿಟಿ ಪ್ರಮಾಣ ಶೇ.೩.೪೮ ಕ್ಕೆ ಇಳಿದಿದೆ.

ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ ೪.೩೭ ಕೋಟಿ ದಾಟಿದ್ದು ಇಲ್ಲಿಯ ತನಕ ಚೇತರಿಸಿಕೊಂಡು ಬಿಡುಗಡೆಯಾದವರ ಸಂಖ್ಯೆ ೪,೩೨,೪೬,೮೨೯ಕ್ಕೆ ಏರಿಕೆಯಾಗಿದೆ. ಜೊತೆಗೆ ಇಲ್ಲಿಯ ತನಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ೫,೨೬,೧೧೦ಕ್ಕೆ ಹೆಚ್ಚಳವಾಗಿದೆ.

ಹೊಸದಾಗಿ ೩೦,೪೨,೪೭೬ ಡೋಸ್ ಲಸಿಕೆ ನೀಡಲಾಗಿದ್ದು ಇದುವರೆಗೆ ಒಟ್ಟು ೨೦೨,೫೦,೫೭,೭೧೭ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.