ಸೋಂಕು, ಸಾವು- ಕುಸಿತ

ನವದೆಹಲಿ, ಜೂ.೬- ದೇಶದಲ್ಲಿ ಸರಿ ಸುಮಾರು ಎರಡು ತಿಂಗಳ ಬಳಿಕ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದೆ. ಸೊಂಕಿನ ಚೇತರಿಕೆ ಪ್ರಮಾಣ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಸಂಖ್ಯೆಯಲ್ಲಿ ಕುಸಿತ ಕಾಣುತ್ತಿದೆ
ದೇಶದಲ್ಲಿ ೧.೧೪ ಲಕ್ಷ ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು ೨೬೬೭ ಮಂದಿ ಸಾವನ್ನಪ್ಪಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ಸಮಯದ ಬಳಿಕ ಸಕ್ರಿಯ ಪ್ರಕರಣ ದೇಶದಲ್ಲಿ ೧೪.೭೭ ಲಕ್ಷಕ್ಕೆ ಒಳಗೆ ಇಳಿದಿದೆ.
ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಚೇತರಿಕೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇದುವರೆಗೂ ಚೇತರಿಕೆ ಪ್ರಮಾಣದಲ್ಲಿಯೂ ಗಣನೀಯ ಏರಿಕೆಕಂಡಿದೆ
ಅತಿ ಹೆಚ್ಚು ಸೋಂಕು ಮತ್ತು ಸಾವಿನ ಸಂಖ್ಯೆ ದಾಖಲಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಚೇತರಿಕೆ ಶೇ ೯೫.೦೧ಕ್ಕೆ ಏರಿಕೆಯಾಗಿದ್ದು ಸೋಂಕಿನಿಂದ ಸಾವನ್ನಪ್ಪುವರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದುವರೆಗೂ ಸಾವನ್ನಪ್ಪುತ್ತಿರುವ ಪ್ರತಿಶತ ೧.೭೧ ರಷ್ಟು ಇದೆ.
ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಕೇರಳ ತಮಿಳುನಾಡು ಆಂಧ್ರಪ್ರದೇಶದ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳಿದ್ದು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸೋಂಕು ಪ್ರಮಾಣ ಮತ್ತು ಸಾವಿನ ಪ್ರಮಾಣ ಕಡಿಮೆಯಾಗುತ್ತದೆ…

೧.೧೪ ಹೊಸ ಪ್ರಕರಣ:

ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ಹೊಸದಾಗಿ ೧,೧೪,೪೬೦ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ೨,೬೭೭ ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು ಇಂದು ೧,೮೯,೨೩೨ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ
ಇಂದು ಬೆಳಗ್ಗೆ ೮ ಗಂಟೆ ತನಕ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯವರೆಗೂ ಒಟ್ಟಾರೆ ಸೋಂಕಿನ ಸಂಖ್ಯೆ ೨,೮೮,೦೯,೩೩೯ಕ್ಕೆ ಏರಿಕೆಯಾಗಿದೆ. ಜೊತೆಗೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ ೨,೬೯,೮೪,೭೮೧ಕ್ಕೆ ಏರಿದೆ.ಇಲ್ಲಿ ತನಕ ಸೋಂಕಿನಿಂದ ೩,೪೬,೭೫೯ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ

ಕುಸಿದ ಸಕ್ರಿಯ ಪ್ರಕರಣ:

ದೇಶದಲ್ಲಿ ಕಳೆದ ಹಲವು ದಿನಗಳಿಂದ ಕೊರೊನಾ ಸೋಂಕು ಚೇತರಿಕೆ ಪ್ರಮಾಣ ನಿತ್ಯ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳು ಇದೇ ಮೊದಲ ಬಾರಿಗೆ ೧೫ ಲಕ್ಷಕ್ಕೂ ಕಡಿಮೆ ದಾಖಲಾಗಿದೆ.
ಸದ್ಯ ದೇಶದಲ್ಲಿ,೧೪,೭೭,೭೯೯ ಮಂದಿಯಲ್ಲಿ ಸಕ್ರಿಯ ಪ್ರಕರಣಗಳು ಇವೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗುವ ವಿಶ್ವಾಸವಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಇದುವರೆಗೂ ೨೩,೧೩,೨೨,೪೧೭ ಮಂದಿಗೆ ಲಸಿಕೆ ಹಾಕಿರುವುದಾಗಿಯೂ ಕೂಡ ತಿಳಿಸಿದೆ

೩೬ ಕೋಟಿಗೂ ಅಧಿಕ ಪರೀಕ್ಷೆ

ದೇಶದಲ್ಲಿ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಪತ್ತೆ ಪ್ರಮಾಣವನ್ನು ಕೇಂದ್ರ ಸರ್ಕಾರ ಹೆಚ್ಚು ಮಾಡಿದೆ.
ನೆನ್ನೆ ಒಂದೇ ದಿನ ೨೦,೩೬,೩೧೧ ಮಂದಿಗೆ ದೇಶಾದ್ಯಂತ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ ಇದರೊಂದಿಗೆ ಒಟ್ಟಾರೆಯಾಗಿ ಇಲ್ಲಿಯತನಕ ೩೬,೪೭,೪೬,೫೨೨ ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ -ಐಸಿಎಂಆರ್ ತಿಳಿಸಿದೆ.