ಸೋಂಕು ಹರಡುವಿಕೆ ಸ್ಥಿರ

ನವದೆಹಲಿ, ಜೂ.೨- ದೇಶದಲ್ಲಿ ಗರಿಷ್ಠ ಪ್ರಮಾಣದ ಸೋಂಕು ಸಂಖ್ಯೆ ದಾಟಿ ದೇಶ ಮುನ್ನಡೆದಿದೆ ಎಂದು ಹೇಳಿರುವ ಕೇಂದ್ರ ಸರ್ಕಾರ,ದೇಶದ ಅರ್ಧಕ್ಕಿಂತಲೂ ಹೆಚ್ಚು ರಾಜ್ಯಗಳಲ್ಲಿ ಶೇ.೫ ಕ್ಕಿಂತಲೂ ಕಡಿಮೆ ಪಾಸಿಟಿವ್ ಪ್ರಕರಣಗಳಿವೆ ಎಂದು ಹೇಳಿದೆ
ದೇಶದ ೩೫೦ ಜಿಲ್ಲೆಗಳಲ್ಲಿ ಶೇಕಡ ೫ಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳು ಇವೆ. ೧೪೫ ಜಿಲ್ಲೆಗಳಲ್ಲಿ ಶೇಕಡ ೫ರಿಂದ ೧೦ರಷ್ಟು ಸಕ್ರಿಯ ಪ್ರಕರಣಗಳು ಇವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ನಿರ್ದೇಶಕ ಡಾ.ಬಲರಾಮ್ ಭಾರ್ಗವ ತಿಳಿಸಿದ್ದಾರೆ
೨೩೯ ಜಿಲ್ಲೆಗಳಲ್ಲಿ ಶೇಕಡ ಅದಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ .ಈ ಜಿಲ್ಲೆಗಳಲ್ಲಿ ಸೋಂಕು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯ ಮತ್ತು ಅನಿವಾರ್ಯತೆ ಇದೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಇದೆ ಎಂದು ಅವರು ಸೂಚನೆ ನೀಡಿದ್ದಾರೆ
ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡದ ಪ್ರಕಾರ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕು ಪತ್ತೆ ಪ್ರಮಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವ್ ಪ್ರಕರಣ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಈಗಿರುವ ಪರಿಸ್ಥಿತಿಯಲ್ಲಿ ಮುಂದಿನ ಎರಡು ವಾರಗಳ ಕಾಲ ಕಾಯ್ದುಕೊಂಡು ಹೋದರೆ ಇನ್ನಷ್ಟು ಸೋಂಕು ಪ್ರಮಾಣ ಗಣನೀಯವಾಗಿ ತಗಲಿದೆ ಎಂದು ಅವರು ಹೇಳಿದ್ದಾರೆ.
೬೦೦ ಜಿಲ್ಲೆಗಳಲ್ಲಿ ೧೦ಕ್ಕೂ ಕಡಿಮೆ ಪಾಸಿಟಿವ್:
ದೇಶದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಇನ್ನೂರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶೇಕಡ ಹತ್ತಕ್ಕೂ ಕಡಿಮೆ ಸೋಂಕು ಪ್ರಮಾಣ ಇತ್ತು ಅದೀಗ ಏಪ್ರಿಲ್ ಅಂತ್ಯದ ವೇಳೆಗೆ ೬೦೦ ಜಿಲ್ಲೆಗಳಲ್ಲಿ ಈ ಪ್ರಮಾಣ ಇದೆ ಇದು ಆಶಾದಾಯಕ ಬೆಳವಣಿಗೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಮಾಣ ತಗ್ಗಿದೆ ಇದನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಮಾಡುವ ಮೂಲಕ ಸೋಂಕು ಪ್ರಮಾಣವನ್ನು ಕಡಿಮೆ ಮಾಡಲು ಗಮನಹರಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ನೀತಿ ಆಯೋಗದ ಸದಸ್ಯ ವಿ.ಕೆಪಾಲ್ ಮಾತನಾಡಿ, ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗರಿಷ್ಠ ಪ್ರಮಾಣ ಮೇರಿ ಇದೀಗ ಕಡಿಮೆಯಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ ಹೀಗಾಗಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ