ಸೋಂಕು ಹೆಚ್ಚಳ: ಕಠಿಣ ಕ್ರಮಕ್ಕೆ ಕೇಂದ್ರದ ಸೂಚನೆ

ನವದೆಹಲಿ,ಮಾ.೧೨-ದೇಶದಲ್ಲಿ ಕೊರೊನಾ ಸೋಂಕು ಕಡಿಮೆಯಾಯಿತು ಎನ್ನುವಾಗಲೇ ಮತ್ತೆ ಸೋಂಕು ಹೆಚ್ಚಾಗಿರುವುದು ಆತಂಕ ಮೂಡಿಸಿರುವ ಬೆನ್ನಲ್ಲೇ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ, ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದೆ. ಸೋಂಕು ಹೆಚ್ಚಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ತಡೆಗೆ ಬಿಗಿಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಅವರು ಸೋಂಕು ಹೆಚ್ಚಳವಾಗದಂತೆ ಹೆಚ್ಚಿನ ಕಾಳಜಿ ಮತ್ತು ಜಾಗೃತೆ ವಹಿಸಬೇಕಾಗಿದೆ ಎಂದು ಸೂಚನೆ ನೀಡಿದ್ದಾರೆ.
ಅದರಲ್ಲಿಯೂ ಕೆಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೊನಾ ಸೋಂಕು ನಿತ್ಯ ಏರಿಕೆ ಹಿನ್ನೆಲೆಯಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಸೋಂಕು ಕಡಿಮೆ ಮಾಡಲು ಮತ್ತು ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
೫೨೪ ಮಂದಿಯಲ್ಲಿ ಹೊಸ ಸೋಂಕು

ದೇಶದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದೆ ಎಂದು ನೆಮ್ಮದಿಯ ನಿಟ್ಟಿಸಿರುವ ಬಿಡುವ ನಡುವೆಯೇ ಕಳೆದ ೨೪ ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ ೫೨೪ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು ಆತಂಕ ಹೆಚ್ಚಿಸಿದೆ.

ದೇಶದಲ್ಲಿ ೧೧೩ ದಿನಗಳ ನಂತರ ಅತಿ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸಂಖ್ಯೆ ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿನ ಸಕ್ರಿಯ ಸಂಖ್ಯೆ ೩,೬೧೮ ಮಂದಿಗೆ ಏರಿಕೆಯಾಗಿದೆ ಎಂದು ಸಚಿವಾಲಯ ತನ್ನ ಅಧಿಕೃತ ಮಾಹಿತಿಯಲ್ಲಿ ಈ ವಿಷಯ ತಿಳಿಸಿದೆ.