ಸೋಂಕು ಹೆಚ್ಚಳ: ಬ್ರಿಟನ್‌ನಲ್ಲಿ ಲಾಕ್ ಡೌನ್ ವಿನಾಯಿತಿ ರದ್ದು

ಲಂಡನ್,ಡಿ.೨೦- ಇಂಗ್ಲೆಂಡ್‌ನಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಾಗುತ್ತಿದ್ದು ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ನೀಡಲಾಗಿದ್ದ ಲಾಕ್‌ಡೌನ್ ವಿನಾಯಿತಿ ರದ್ದು ಮಾಡಲಾಗಿದೆ.
ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಪ್ರಮುಖ ಭಾಗಗಳಲ್ಲಿ ನಿರ್ಬಂಧ ವಿಧಿಸಲು ಅಲ್ಲಿನ ಸರ್ಕಾರ ಮುಂದಾಗಿತ್ತು. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಬಂಧವನ್ನು ತೆಗೆದು ಹಾಕಿತ್ತು.
ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬದ ವಿನಾಯಿತಿ ರದ್ದು ಮಾಡಿ ಎಲ್ಲರೂ ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ.
ಸೋಂಕಿಗೆ ಲಸಿಕೆ ಬರುವ ತನಕ ಜನರು ಆದಷ್ಟು ಎಚ್ಚರಿಕೆಯಿಂದ ಇರುವುದು ಒಳಿತು ಎಂದು ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.
ಇಂಗ್ಲೆಂಡ್‌ನ ಮೂರು ಮತ್ತು ನಾಲ್ಕನೇ ಹಂತದ ನಗರಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಲಾಕದ ಡೌನ್ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸುವಂತೆ ಅವರು ಸೂಚಿಸಿದ್ದಾರೆ.
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ನ ಜನರನ್ನು ಅದರಿಂದ ಪಾರುಮಾಡುವುದು ಸರ್ಕಾರದ ಕೆಲಸ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ
ಡಿಸೆಂಬರ್ ೩೦ರ ತನಕ ನಿರ್ಬಂಧ:
ಕ್ರಿಸ್ಮಸ್ ಹಬ್ಬಕ್ಕೆ ನೀಡಿರುವ ವಿನಾಯಿತಿಯನ್ನು ತೆಗೆದುಹಾಕಿರುವ ಇಂಗ್ಲೆಂಡ್ ಸರ್ಕಾರ ಡಿಸೆಂಬರ್ ೩೦ ರ ತನಕ ಕಡ್ಡಾಯವಾಗಿ ಲಾಕ್‌ಡೌನ್ ಸೇರಿದಂತೆ ಇನ್ನಿತರೆ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು ಇಲ್ಲದಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಇಂಗ್ಲೆಂಡ್‌ನಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳೆದ ನವೆಂಬರ್ನಲ್ಲಿ ಹಲವು ಕಡೆ ನಿರ್ಬಂಧ ವಿಧಿಸುವ ಜೊತೆಗೆ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಇಂಗ್ಲೆಂಡ್ ಹಲವು ಜನರ ಒತ್ತಾಯದ ಮೇರೆಗೆ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ವಿನಾಯಿತಿ ನೀಡಲಾಗಿತ್ತು ಇದೀಗ ಅದನ್ನು ರದ್ದುಪಡಿಸಲಾಗಿದೆ.
ಇಂಗ್ಲೆಂಡ್‌ನಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಹೀಗಾಗಿ ಜನರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಇಂಗ್ಲೆಂಡ್‌ನ ಆರೋಗ್ಯ ಇಲಾಖೆಯ ಕಾರ್ಯದರ್ಶಿ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ:
ಲಸಿಕೆ ಸಿಗುವತನಕ ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಅನೇಕ ದೇಶಗಳ ಜನರು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸುವ ಜೊತೆಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ