ಸೋಂಕು ಹೆಚ್ಚಳ ಸೃಷ್ಟಿಸಿದ ಆತಂಕ

ನವದೆಹಲಿ, ಮೇ.೫-ದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ತುಸು ಕಡಿಮೆಯಾಗಿದ್ದ ಕೊರೋನಾ ಸೋಂಕು ಪ್ರಕರಣ ಮತ್ತೆ ಏರಿಕೆಯಾಗಿರುವುದು ಮತ್ತಷ್ಟು ಆತಂಕ ಹೆಚ್ಚು ಮಾಡಿದೆ.
ಎರಡನೇ ಹಂತದ ಅಲೆಯ ಸೋಂಕು ಆರ್ಭಟ ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಜನರು ಬೆಚ್ಚಿಬಿದ್ದಿದ್ದಾರೆ.
ವಿವಿಧ ರಾಜ್ಯಗಳ ಅನೇಕ ಗ್ರಾಮಗಳಲ್ಲಿ ಸೋಂಕು ಪ್ರಕರಣಗಳು ಕಂಡು ಬರುತ್ತಿವೆ.ಇದರಿಂದಾಗಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮತ್ತಷ್ಟು ಮೂಡಿಸಿದೆ.
ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೩,೮೨,೩೧೫ ಕಾಣಿಸಿಕೊಂಡಿದೆ ೩,೭೮೦ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೊತೆಗೆ ೩,೩೮,೪೩೯ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇಂದು ಬೆಳಗ್ಗೆ ೮ ಗಂಟೆಯ ತನಕ ದೇಶದಲ್ಲಿ ಒಟ್ಟಾರೆ ಸೋಂಕಿನ ಸಂಖ್ಯೆ ೨,೦೬,೬೫,೧೪೮ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇದುವರೆಗೆ ೨,೨೬,೧೮೮ ಮಂದಿ ಮೃತಪಟ್ಟಿದ್ದಾರೆ ದೇಶದಲ್ಲಿ ಎಲ್ಲಿಯವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ೧,೬೯,೫೧,೭೩೧ ಏರಿಕೆಯಾಗಿದೆ.

೩೪.೮೭ ಲಕ್ಷ ಸಕ್ರಿಯ ಪ್ರಕರಣ;
ದೇಶದ ವಿವಿಧ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಸೋಂಕು ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ.
ಮಹಾರಾಷ್ಟ್ರ, ಕರ್ನಾಟಕ, ಕೇರಳ,ತಮಿಳುನಾಡು, ತೆಲಂಗಾಣ, ಆಂದ್ರ ಪ್ರದೇಶ, ಮದ್ಯಪ್ರದೇಶ, ಉತ್ತರ ಪ್ರದೇಶ, ಚತ್ತೀಸ್ಗಡ ,ಚಂದಿಗಡ,ದೆಹಲಿ, ಹರಿಯಾಣ ವಿವಿಧ ರಾಜ್ಯದಲ್ಲಿ ಸೋಂಕು ಗಣನೀಯವಾಗಿ ಏರಿಕೆಯಾಗುತ್ತಿದೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕಳೆದ ಎರಡು ಮೂರು ತಿಂಗಳಿನಿಂದ ಗಣನೀಯವಾಗಿ ಏರಿಕೆಯಾಗುತ್ತಿದ್ದು ಮಹಾರಾಷ್ಟ್ರದಲ್ಲಿ ಸೋಂಕು ಸಂಖೆ ಕಡಿಮೆಯಾಗಿದೆ ಆದರೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ದೇಶದಲ್ಲಿ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ
ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೧೫,೪೧,೨೯೯ ಮಂದಿಗೆ ಕೊರೋನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ.ಇದುವರೆಗೆ ದೇಶದಲ್ಲಿ ೨೯,೪೮,೫೨,೦೭೮ ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ- ಐಸಿಎಂಆರ್ ತಿಳಿಸಿದೆ.

೧೬ ಕೋಟಿಗೆ ಲಸಿಕೆ

ದೇಶದಲ್ಲಿ ಕೊರೋನಾ ಸೋಂಕು ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಪ್ರಗತಿಯಲ್ಲಿದೆ.

ಸದ್ಯ ಇಲ್ಲಿಯವರೆಗೆ ೧೬,೦೪,೯೪,೧೮೮ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.