ಸೋಂಕು ಹೆಚ್ಚಳ: 3 ಸೂತ್ರ ಪಾಲನೆಗೆ ಡಿಹೆಚ್ಓ ಮನವಿ..

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದರೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಮನವಿ ಮಾಡಿದರು.