ಸೋನಾ ಬೇಬಿ ಜೊತೆ ಹೆಜ್ಜೆ ಹಾಕಿದ ಪ್ರಜ್ವಲ್ ದೇವರಾಜ್ 

ನಟ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರದ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರಕ್ಕಾಗಿ ಡಾ ವಿ.ನಾಗೇಂದ್ರಪ್ರಸಾದ್ ಬರೆದಿರುವ “ಮೈ ನೇಮ್ ಇಸ್ ಸೋನಾ ಬೇಬಿ ಬೇಬಿ.. ಕಣ್ಣಾಮುಚ್ಚಾಲೆ ನನ್ನ ಹಾಬಿ” ಎಂಬ ಹಾಡು ಬಿಡುಗಡೆಯಾಗಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಮಾಸ್ ಐಟಂ ಹಾಡಿಗೆ ಪ್ರಜ್ವಲ್ ದೇವರಾಜ್ , ನಮೃತಾ ಮಲ್ಲ ಹಾಗೂ ರವಿಕಾಳೆ ಹೆಜ್ಜೆ ಹಾಕಿದ್ದಾರೆ.

ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ. “ಸೋನಾ ಬೇಬಿ” ಹಾಡು  ಅಧಿಕ ಸಂಖ್ಯೆಯಲ್ಲಿ  ವೀಕ್ಷಣೆಯಾಗುತ್ತಿದ್ದು, ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ಪಾರ್ಥು ನಿರ್ಮಿಸಿರುವ  ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದೆ. ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.