ಸೋನಿಯಾಗಾಂಧಿ ಇಡಿ ತನಿಖೆ ವಿರೋಧಿಸಿ ಕಾಂಗ್ರೆಸ್ಸಿನಿಂದ ಬೃಹತ್ ಪ್ರತಿಭಟನೆ

ಕಲಬುರಗಿ,ಜು.20:ಎಐಐಸಿಸಿ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ ಅವರಿಗೆ ಇಡಿ ತನಿಖೆಗೆ ಒಳಪಡಿಸುವುದನ್ನು ಖಂಡಿಸಿ ಜುಲೈ 22ರಂದು ಬೆಳಿಗ್ಗೆ 10-30ಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಅವರು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಈಶ್ವರ್ ಖಂಡ್ರೆ ಅವರು ಪಾಲ್ಗೊಳ್ಳುವರು. ಆದ್ದರಿಂದ ಕಾಂಗ್ರೆಸ್ ಪಕ್ಷದ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರು, ಸಚಿವರು, ಸಂಸದರು, ಕೆಪಿಸಿಸಿ ಸದಸ್ಯರು, ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ವಿವಿಧ ಮುಂಚೂಣಿ ಘಟಕ/ವಿಭಾಗ/ಸೆಲ್‍ಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ಹಾಲಿ ಹಾಗೂ ಮಾಜಿ ಚುನಾಯಿತ ಪ್ರತಿನಿಧಿಗಳು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಸಮಸ್ತ ಮಹಿಳೆಯರು, ಯುವಕರು, ಕಾರ್ಯಕರ್ತರು ಭಾಗವಹಿಸಬೇಕೆಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.