ಸೋನಿಯಾ,ರಾಹುಲ್ ಅವರನ್ನೆ ಬಿಟ್ಟಿಲ್ಲ: ನನ್ನನ್ನು ಬಿಡುತ್ತಾರೆಯೇ – ಡಿಕೆಶಿ ಪ್ರಶ್ನೆ

ಬೆಂಗಳೂರು, ಜು. 28- ಜಾರಿ ನಿರ್ದೇಶನಾಲಯದ ಮುಂದೆ ಇದೇ 30 ರಂದು ಇಡಿ ವಿಚಾರಣೆಗೆ ಹಾಜರುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೇ ಬಿಡುತ್ತಿಲ್ಲ. ಇನ್ನು ನನ್ನನ್ನು ಬಿಡುತ್ತಾರೆಯೇ?’ ಎಂದು ಪ್ರಶ್ನಿಸಿದ್ದಾರೆ.

ಚನ್ನಪಟ್ಟಣದ ಗೌಡಗೆರೆಯ ಚಾಮುಂಡೇಶ್ವರಿ ದೇವಿಯ ಮಹಾಮಸ್ತಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ ‘ ಎಂದು ಗಂಬೀರ ಆರೋಪ ಮಾಡಿದ್ದಾರೆ.

ನಾನು ತಪ್ಪು ಮಾಡಿಲ್ಲ ಎಂದರೆ ಈ ತಾಯಿ ನನ್ನನ್ನು ರಕ್ಷಿಸುತ್ತಾಳೆ. ಕೆಲವರು ಏನೇನೋ ಆಸೆ ಪಡುತ್ತಿದ್ದಾರೆ. ನನ್ನನ್ನು ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಆ ಬಗ್ಗೆ ನಿಧಾನವಾಗಿ ಮಾತನಾಡುತ್ತೇನೆ ಎಂದಿದ್ದಾರೆ.

ಜನೋತ್ಸವ ರದ್ದು ಸ್ವಾಗತಾರ್ಹ:

ಬಿಜೆಪಿ ಸರಕಾರ ಜನೋತ್ಸವ ಕಾರ್ಯಕ್ರಮ ರದ್ದು ಮಾಡಿರುವುದು ಸ್ವಾಗತಾರ್ಹ ಎಂದು ಅವರು ಹೇಳಿದರು.

ಶಿಕ್ಷೆ ಆಗಲಿ:

ಯಾವುದೇ ಪಕ್ಷದ ಯುವಕ ಆದರೂ ಈ ರೀತಿ ಕಗ್ಗೊಲೆ ಆಗಬಾರದು. ಕಾರ್ಯಕರ್ತರ ನೋವಿನ ಬಗ್ಗೆ ನಮಗೆ ಅರಿವಿದೆ. ಈ ಪ್ರಕರಣ ಖಂಡಿಸುತ್ತೇನೆ. ಮುಖ್ಯಮಂತ್ರಿಗಳು ಎಲ್ಲಾ ಕಾನೂನು ಬಳಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತ್ರ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಯಾವುದೇ ಪಕ್ಷ, ಧರ್ಮದವರಾದರೂ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ ‘ ಎಂದು ತಿಳಿಸಿದ್ದಾರೆ‌