ಸೋನಿಯಾ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ

ನವದೆಹಲಿ.ಡಿ೯: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.
‘ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ,‘ ಎಂದು ಮೋದಿ ಅವರು ಒಂದು ಸಾಲಿನ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿರುವ ಗಾಂಧಿ ಅವರು ಗುರುವಾರ ತಮ್ಮ ೭೫ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.