ಸೋಮವಾರಪೇಟೆ ಮಠಕ್ಕೆ ಭೇಟಿ : ವಿಶೇಷ ಪೂಜೆ

ರಾಯಚೂರು.ಮಾ.೩೧- ರಾಯಚೂರು ನಗರದ ಸೋಮವಾರ ಪೇಟೆ ಮಠಕ್ಕೆ ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಜಿ.ಕುಮಾರ್ ಅವರು ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್‌ಎಸ್ ಬೋಸರಾಜು ಅವರು ಶ್ರೀ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆದು ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ವೀರ ರಾಚೋಟಿ ಶಿವಾಚಾರ್ಯ ಮಹಾ ಸ್ವಾಮಿಗಳಿಗೆ ಸನ್ಮಾನಿಸಿ ಆಶೀರ್ವಾದ ಪಡೆದರು.ಮಠದ ಶ್ರೀಗಳು ಕಾಂಗ್ರೆಸ್ ಅಭ್ಯರ್ಥಿಯಾದ ಜಿ.ಕುಮಾರ್ ನಾಯಕರೆ ಅವರಿಗೆ ಹಾಗೂ ಸಚಿವರಾದ ಎನ್.ಎಸ್.ಬೋಸರಾಜು ಅವರಿಗೆ ಸನ್ಮಾನಿಸಿ ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಬಸವರಾಜ ರೆಡ್ಡಿ, ಸಾಜಿದ್ ಸಮೀರ್, ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಬಸವರಾಜ ಪಾಟೀಲ್ ಅತ್ತನೂರು, ಯುವ ಮುಖಂಡರಾದ ಹನುಮಂತ ಹೊಸೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.