ಸೋಲು, ಗೆಲವು ಸಮಾನವಾಗಿ ಸ್ವೀಕರಿಸಿ

ಮಾಲೂರು, ಜು. ೨೧:ವಿದ್ಯಾರ್ಥಿಗಳು ವ್ಯಾಸಂಗದ ದಿನಗಳಲ್ಲಿ ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಮನೋಭಾವದಿಂದ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸುವಂತೆ ಬಿಇಓ ಆಲಿಂ ಉನ್ನಿಸಾ ಹೇಳಿದರು.
ಅವರು ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಹೋಬಳಿ ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕೇವಲ ಅಂಕಪಟ್ಟಿಗೆ ಮಾತ್ರ ಸೀಮಿತರಾದಂತೆ ವರ್ತಿಸುತ್ತಿದ್ದು ಮನುಷ್ಯನ ಜೀವನದಲ್ಲಿ ಕ್ರೀಡೆಗಳಿಗೂ ಹೆಚ್ಚಿನ ಮಹತ್ವವಿದೆ ವಿದ್ಯಾರ್ಥಿ ದಿಸೆಯಲ್ಲಿಯೇ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳುವುದರಿಂದ ದೇಹಾರೋಗ್ಯದ ಜೊತೆಗೆ ಮಾನಸಿಕ ಮತ್ತು ಬೌಧಿಕ ಸ್ಥಿಮಿತ ಕಾಪಾಡಬಹುದಾಗಿದೆ ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಮಕೃಷ್ಣಪ್ಪ, ಬಿ.ಆರ್‌ಸಿ ಸಮನ್ವಯಾಧಿಕಾರಿ ನಂಜುಂಡಗೌಡ, ಶಿಕ್ಷಣ ಸಂಯೋಜಕರಾದ ರೋಷನ್ ಜಮೀರ್, ಬಾಬಾಜಾನ್, ಜಗದಾಂಬ, ಟಿಪಿಒ ಗೋಪಾಲ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ್, ಪ್ರಧಾನ ಕಾರ್ಯದರ್ಶಿ ಆಂಜಿನಪ್ಪ, ದೈಹಿಕ ಶಿಕ್ಷಕರುಗಳಾದ ಸುರೇಂದ್ರ, ಗೋಪಿನಾಥ್, ನಾಗರಾಜ್, ಮಂಜುನಾಥ್, ಶ್ರೀನಿವಾಸ್, ಲಕ್ಷ್ಮಿಕಾಂತ್, ಇತರರು ಹಾಜರಿದ್ದರು.