ಸೋಲು, ಗೆಲುವು ಚರ್ಚೆ ಡಿ. ೬ ಇಂಡಿಯಾ ಸಭೆ

ನವದೆಹಲಿ,ಡಿ.೩- ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದ ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ ೬ ರಂದು ಇಂಡಿಯಾ ಮೈತ್ರಿಕೂಟದ ನಾಯಕರ ಮಹತ್ವದ ಸಭೆ ಕರೆದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಲು ಮೈತಿ ಪಕ್ಷಗಳ ನಾಯಕರಿಗೆ ಡಿಸೆಂಬರ್ ೬ ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲು ಮಿತ್ರ ಪಕ್ಷದ ಪಾತ್ರ ಸೇರಿದಂಎತ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸುವ ಸಾದ್ಯತೆಗಳಿವೆ ಎನ್ನಲಾಗಿದೆ.
ಛತ್ತೀಸ್ ಗಢ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಯ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಹಿಡಿದಿದೆ, ಹಿನ್ನೆಲೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷದ ಸೋಲಿಗೆ ಕಾರಣ ಏನು ಎನ್ನುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಇದೇ ವೇಳೆ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಒಗ್ಗಟ್ಟಿನ ಹೋರಾಟ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಮುಂದಾಗಿದೆ.