ಸೌಲಭ್ಯಕ್ಕೆ ಆಗ್ರಹಿಸಿ ಮನವಿ

ಲಕ್ಷ್ಮೇಶ್ವರ,ಜ9: ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಗಿಹಾಳ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿ ಪತ್ರದಲ್ಲಿ ಸೋಗಿಹಾಳ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಚರಂಡಿ ಅವ್ಯವಸ್ಥೆ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವುದು, ಸಮರ್ಪಕ ಬೀದಿ ದೀಪ ವ್ಯವಸ್ಥೆ ಬಸ್ ನಿಲ್ದಾಣದ ದುರಸ್ತಿ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ, ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷ ರಿಯಾಜ್ ಗದಗ, ಪ್ರವೀಣ್ ಹುಲುಗಣ್ಣವರ, ಯಲ್ಲನಗೌಡ ಪಾಟೀಲ, ಬಸವರಾಜ ಶಿರಮಾಪೂರ ಸೇರಿದಂತೆ ಅನೇಕರಿದ್ದರು.