ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಕ್ಕೆ ಲೋಕ ಅದಾಲತ್ ಉತ್ತಮ ವೇದಿಕೆ;

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೮: ರಾಜೀ ಸಂಧಾನದ ಮೂಲಕ ಸೌಹಾರ್ದಯುತವಾಗಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದು ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವಾಗಿದೆ. ಜುಲೈ 13 ರಂದು ರಾಷ್ಟಿçÃಯ ಲೋಕ ಅದಾಲತ್ ನಡೆಯಲಿದ್ದು ಪಕ್ಷಗಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ್ ವಾಸುದೇವ್ ಹೇಳಿದರು.ಈ ಕುರಿತು  ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರುತ್ತಾರೆ. ನ್ಯಾಯಾಲಯದಲ್ಲಿ ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ ಇನ್ನೂ ನ್ಯಾಯಾಲಯ ಪ್ರವೇಶಿಸದೇ ಇರುವಂತಹ ಪ್ರಕರಣಗಳನ್ನು ಸಹ ಜನತಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ ಮುಂದಿನ ತಿಂಗಳು ಜುಲೈ 13 ರಂದು ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಬೃಹತ್ ರಾಷ್ಟಿçÃಯ ಲೋಕ ಅದಾಲತ್ ನಡೆಯಲಿದೆ. ಕಕ್ಷಿಗಾರರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶ್ ರೋಣ್ ವಾಸುದೇವ್ ಕೋರಿದರು.3772 ವಾಜ್ಯ ಹಾಗೂ 113399 ವಾಜ್ಯಪೂರ್ವ ಪ್ರಕರಣಗಳ ಇತ್ಯರ್ಥಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 3772 ವ್ಯಾಜ್ಯ ಪ್ರಕರಣ ಹಾಗೂ 113399 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಳೆದ ಮೆಗಾ ಲೋಕ್ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಲಾಗಿದೆ. ಒಟ್ಟು 118520 ಪ್ರಕರಣಗಳನ್ನು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವಿಲೇವಾರಿ ಮಾಡಲಾಗಿದೆ. ಮದುವೆ ಬಂಧನವನ್ನು ಮುರಿಯುವುದು ನ್ಯಾಯಾಲಯದ ಕೆಲಸವಲ್ಲ. ಅಂತಿಮ ಹಂತದವರೆಗೂ ಪತಿ ಪತ್ನಿಯರಿಗೆ ಒಟ್ಟಾಗಿ ಜೀವಿಸಲು ತಿಳಿ ಹೇಳಲಾಗುತ್ತದೆ. ಈ ಹಿನ್ನಲೆಯಲ್ಲಿ ಕಳೆದ ಲೋಕ ಅದಾಲತ್‌ನಲ್ಲಿ ಚಿತ್ರದುರ್ಗ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚೇಧನಕ್ಕಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 09 ಜೋಡಿಗಳನ್ನು ಪುನಃ ಒಂದು ಮಾಡಲಾಗಿದೆ ಎಂದು ನ್ಯಾಯಾಧೀಶ ರೋಣ್ ವಾಸುದೇವ್ ಮಾಹಿತಿ ನೀಡಿದರು.