ಸ್ಕಾಲರ್ ಪಿ.ಯು ಕಾಲೇಜಿಗೆ 100% ಫಲಿತಾಂಶ

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಏ.11: ಪಟ್ಟಣದ ಹಳೆ ಮೈಸೂರು ರಸ್ತೆಯಲ್ಲಿರುವ ಸ್ಕಾಲರ್ ಪದವಿ ಪೂರ್ವ ಕಾಲೇಜು ಸತತ ಏಳನೇ ವರ್ಷವೂ ಶೇ.100 ಫಲಿತಾಂಶ ಪಡೆಯುವ ಮೂಲಕ ತಾಲ್ಲೂಕಿನಲ್ಲಿ ಉತ್ತಮ ಹೆಸರು ಗಳಿಸಿದೆ.
ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಒಟ್ಟು 158 ವಿದ್ಯಾರ್ಥಿಗಳು ಮತ್ತು ವಾಣಿಜ್ಯಶಾಸ್ತ್ರ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಸೇರಿ ಒಟ್ಟು 170 ವಿದ್ಯಾರ್ಥಿಗಳಿದ್ದು 90 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 80 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿನ ಕೀರ್ತಿಯನ್ನು ಬೆಳಗಿದ್ದಾರೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಬಿ.ಎಸ್.ಮೊನಾಲಿಸಾ 586ಅಂಕಗಳನ್ನು ಪಡೆಯುವ ಮೂಲಕ ತಾಲ್ಲೂಕು ಟಾಪರ್ ಆಗಿ ಹೊರಹೊಮ್ಮಿದ್ದರೆ ಹೆಚ್.ಬಿ.ಗಾನವಿ 577 ಅಂಕಗಳಿಸಿ ದ್ವೀತೀಯ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಎಂ.ಸಾನಿಕಾ 584 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರೆ ಸ್ಪಂದನಾ ಜಿ.ಎಸ್. ಎಂಬಾಕೆ 582ಅಂಕಗಳನ್ನು ಪಡೆಯುವ ಮೂಲಕ ತಾಲ್ಲೂಕಿಗೆ ದ್ಚೀತೀಯ ಸ್ಥಾನವನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಉತ್ತಮ ಫಲಿತಾಂಶಕ್ಕೆ ಶ್ರಮಿಸಿದ ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಬೋದಕ, ಬೋದಕೇತರ ವೃಂದ ಹಾಗೂ ಪೆÇೀಷಕ ವರ್ಗದವರನ್ನು ಹಾಗೂ ಉತ್ತಮ ಅಂಕ ಗಳಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರಾದ ಮಂಜುನಾಥ್ ಅಭಿನಂದಿಸಿದ್ದಾರೆ.