ಸ್ಕೂಟರ್‌ಗೆ ಲಾರಿ ಡಿಕ್ಕಿ: ಸವಾರ ಮೃತ್ಯು

ಬಂಟ್ವಾಳ, ಮೇ ೫- ಸ್ಕೂಟರ್‌ಗೆ ಲಾರಿ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕ ಮೃತಪಟ್ಟ ಘಟನೆ ಗಡಿಯಾರ ಸಮೀಪದ ಜೋಗಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಾಲೂಕಿನ ಬುಡೋಳಿ ನಿವಾಸಿ ಇಬ್ರಾಹೀಂ ಎಂಬವರ ಪುತ್ರ ಮುಹಮ್ಮದ್ ಶರೀಫ್ (೩೩) ಮೃತರು. ಶರೀಫ್ ಸಂಚರಿಸುತ್ತಿದ್ದ ಹೋಂಡಾ ಡಿವೋ ಸ್ಕೂಟರ್ ಗೆ ಲಾರಿಯೊಂದು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಶರೀಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.