ಸ್ಕ್ರೀನಿಂಗ್ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳುಪರವಾನಿಗೆ ಪಡೆದ ಶಸ್ತ್ರಾಸ್ತ್ರಗಳ ಹೊತ್ತೊಯುವುದು-ಪ್ರದರ್ಶನ ಮಾಡುವುದು ನಿಷೇಧಿಸಿ ಆದೇಶ

ವಿಜಯಪುರ: ಮಾ.31:ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧ್ಯಕ್ಷತೆಯತಲ್ಲಿ ಜಿಲ್ಲಾ ಆಯುಧ ಸ್ಕ್ರೀನಿಂಗ್ ಸಮಿತಿ ಸಭೆ ಜರುಗಿತು.
ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಹಲವು ಪ್ರಕರಣಳಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆ ಹೊಂದಿದವರು ಶಸ್ತ್ರಾಸ್ರಗಳನ್ನು ಹೊಂದಿದ್ದಲ್ಲಿ, ಪರಿಶೀಲನೆ ನಡೆಸಬೆಕು. ಶಸ್ತ್ರಾಸ್ತ್ರ ಪರವಾನಿಗೆಗೆ ಸ್ವೀಕರಿಸಿ ಅರ್ಜಿಗಳನ್ನು ಸಭೆಯಲ್ಲಿ ಪರಿಶೀಲನೆ ನಡೆಸಿ, ಅಗತ್ಯ ತುರ್ತು ಸಂದರ್ಭದ ಮತ್ತು ಭದ್ರತೆಗೆ ಅಗತ್ಯವಿರುವ ಅರ್ಜಿಗಳನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.
ತುರ್ತು ಸಂದರ್ಭ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ರಿಸರ್ವ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ ಬ್ಯಾಂಕ್‍ಗಳ ಸೆಕ್ಯೂರಿಟಿ ಗಾರ್ಡಗಳಿಗೆ ಶಸ್ತ್ರಾಸ್ತ್ರ ಪರವಾನಿಗೆ ನೀಡಲು ನಿರ್ಧರಿಕಸಲಾಯಿತು.
ಸಭೆಯಲ್ಲಿ ವಿಜಯಪುರ ಡಿವೈಎಸ್‍ಪಿ ಸಿದ್ದೇಶ್ವರ, ಬಸವನಬಾಗೇವಾಡಿ ಡಿವೈಎಸ್‍ಪಿ ಕರುಣಾಕರ ಶೆಟ್ಟಿ, ಇಂಡಿ ಡಿವೈಎಸ್‍ಪಿ ಚಂದ್ರಕಾಂತ ನಂದರೆಡ್ಡಿ, ಗ್ರಾಮೀಣ ಭಾಗದ ಡಿವೈಎಸ್‍ಪಿ ಗಿರೀಶ, ಡಿಎಆರ್ ಪೋಲಿಸ್ ನಿರೀಕ್ಷಕ ಜೆ.ಎಚ್.ಶೇಖ ಉಪಸ್ಥಿತರಿದ್ದರು.
ಆದೇಶ : ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಆಯುಧ ಲೈಸನ್ಸ್ ಹೊಂದಿದವರು (ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ರಿಸರ್ವ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ ಬ್ಯಾಂಕ್‍ಗಳ ಸೆಕ್ಯೂರಿಟಿ ಗರ್ಡಗಳ ಆಯುಧ ಹೊರತುಪಡಿಸಿ) ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲೆಯಾದ್ಯಂತ ದಿನಾಂಕ : 15-05-2023ರ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಹೊತ್ತೊಯ್ಯುವುದನ್ನು ಮತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.