ಸ್ಟಾಂಡ್ ಅಪ್ ಇಂಡಿಯಾ ಯೋಜನೆ ರಾಷ್ಟ್ರೀಯ ಅಭಿವೃದ್ಧಿಗೆ ಪೂರಕ : ಅಷ್ಠಗಿ

ಕಲಬುರಗಿ:ಎ.8:ಸ್ಟಾಂಡ್ ಅಪ್ ಇಂಡಿಯಾ ಯೋಜನೆ ಅಡಿಯಲ್ಲಿ ಕಳೆದ 5 ವರ್ಷಗಳಲ್ಲಿ 1,14,322 ಕ್ಕೂ ಹೆಚ್ಚಿನ ಜನರಿಗೆ 25,580 ಕೋಟಿ ರೂ.ಗಳಿಗೂ ಅಧಿಕ ಸಾಲ ಮಂಜೂರು ಮಾಡಿರುವುದು ರಾಷ್ಟ್ರೀಯ ಅಭಿವೃದ್ಧಿಗೆ ಪೂರಕ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಆದ, ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಯು ಆರ್ಥಿಕ ಸಬಲಿಕರಣ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ಕೋಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟಾಂಡ್ ಅಪ್ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಿತ್ತು. ರಾಷ್ಟ್ರವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯವರ ಮಹತ್ವದ ಯೋಜನೆಗಳಲ್ಲಿ ಇದು ಕೂಡ ಅತಿ ಮಹತ್ವದ್ದಾಗಿದ್ದು; ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ .