ಸ್ಟ್ರಾಂಗ್ ರೂಂ ಸುತ್ತಮುತ್ತ ಪೊಲೀಸರ ನಿಯೋಜನೆ

ಹನೂರು, ಡಿ.28: ಗ್ರಾ.ಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಸೋಲು ಗೆಲುವಿನ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಅಡಕವಾಗಿದೆ. ಈ ಹಿನ್ನಲೆಯಲ್ಲಿ ಮತ ಪೆಟ್ಟಿಗೆಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಂ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ಪೊಲೀಸರ ಕಣ್ಗಾವಲಿನ ಜೊತೆಗೆ ಸಿ.ಸಿ. ಕ್ಯಾಮರಗಳನ್ನು ಅಳವಡಿಸುವ ಮೂಲಕ ನಿಗಾ ಇರಿಸಲಾಗಿದೆ.
ಡಿ.27 ರಂದು ಬೆಳಿಗ್ಗೆ 7 ರಿಂದ ಸಂಜೆ 5 ತನಕ ನೆಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತ್ರಿ ಮತಗಟ್ಟೆಯ ಅಧಿಕಾರಿಗಳು ಮತ ಪೆಟ್ಟಿಗೆಯನ್ನು ಜಿಲ್ಲಾಡಳಿತ ನಿಯೋಜಿಸಿದ ವಾಹನಗಳ ಮೂಲಕ ಸಾಗಿಸಿ ಹನೂರು ಪಟ್ಟಣದಲ್ಲಿರುವ ಶ್ರೀ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕ್ರಿಸ್ತರಾಜ ಶಿಕ್ಷಣ ಸಂಸ್ಥೆ ಸ್ಟ್ರಾಂಗ್ ರೋಮ್‍ನಲ್ಲಿ ಇಡಲಾಗಿದೆ.