ಸ್ಥಳೀಯ ಸಂಸ್ಥೆಗಳು ಹಾಗೂ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ನಾಯಕತ್ವದ ಗುಣ ಬೆಳಸಿಕೊಳ್ಳಬೇಕು:ಉಮಾಶ್ರೀ

ವಿಜಯಪುರ ಜು.18- ಎ.ಐ.ಸಿ.ಸಿ. ಹಾಗೂ ಕೆಪಿಸಿಸಿ ಆದೇಶದಂತೆ “ನಾ ನಾಯಕಿ” ಕಾರ್ಯಕ್ರಮದ ರಾಜ್ಯ ಸಂಚಾಲಕರಾದ ಶ್ರೀಮತಿ ಉಮಾಶ್ರೀ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾಧ್ಯಕ್ಷರಾದ ರಾಜು ಆಲಗೂರ ರವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಈ ಸಭೆಯನ್ನುದ್ದೇಶಿಸಿ ಶ್ರೀಮತಿ ಉಮಾಶ್ರೀರವರು ಮಾತನಾಡುತ್ತಾ ಸ್ಥಳೀಯ ಸಂಸ್ಥೆಗಳು ಹಾಗೂ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ನಾಯಕತ್ವದ ಗುಣಗಳನ್ನು ರೂಪಿಸಿಕೊಳ್ಳುವುದು ರಾಜಕೀಯ ಕ್ಷೇತ್ರದಲ್ಲಿ ಸ್ಥಾನಮಾನಗಳನ್ನು ಪಡೆಯುವುದು ಪಕ್ಷದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಪ್ರತಿಪಾದಿಸುವುದು ಅತ್ಯವಶ್ಯಕವಾಗಿರುವುದರಿಂದ “ನಾ ನಾಯಕಿ” ಕಾರ್ಯಕ್ರಮದ ಸದುಪಯೋಗಳನ್ನು ಪಡೆದುಕೊಳ್ಳಲು ಕರೆ ನೀಡಿದರು.
ಆಗಸ್ಟ್ 3, 2022 ರಂದು ದಾವಣೆಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ನಡೆಯುವ ಅಮೃತ ಮಹೋತ್ಸವ ಕಾರ್ಯಕ್ರಮದ ಜಿಲ್ಲಾ ವೀಕ್ಷಕರಾದ ಹಾಗೂ ಮಾಜಿ ಶಾಸಕರಾದ ಜೆ.ಟಿ. ಪಾಟೀಲ ರವರು ದಿನಾಂಕ:19-07-2022 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆದಿದ್ದು, ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು, ಹಾಲಿ / ಮಾಜಿ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯದರ್ಶಿಗಳು/ಸದಸ್ಯರು, ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ, ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಮಾಜಿ ಸದಸ್ಯರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಜಿಲ್ಲೆಯ ಎಲ್ಲ ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾಮಟ್ಟದ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗವಹಿಸಲು ಜಿಲ್ಲಾಧ್ಯಕ್ಷರಾದ ರಾಜು ಆಲಗೂರ ರವರು ವಿನಂತಿಸಿದ್ದಾರೆ.