
ಬೆಳಗಾವಿ,ಆ.೧೯-ಖಾಸಗಿ ವೀಡಿಯೋ ವಿಚಾರ ಬಹಿರಂಗವಾಗುವ ಭೀತಿಯಲ್ಲಿ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ದಾರುಣ ಘಟನೆ ರಾಯಬಾಗದ ಹಾರೂಗೇರಿ ಪಟ್ಟಣದ ಬಡಬ್ಯಾಕೂಡ್‌ನಲ್ಲಿ ನಡೆದಿದೆ.
ಬಸ್ತವಾಡ ಹೊರವಲಯದ ಅರಣ್ಯ ಪ್ರದೇಶದಲ್ಲಿ ಅಕ್ಬರ್ ಜಮಾದಾರ್ (೨೧)ನನ್ನು ಕೊಲೆಗೈದು ಪರಾರಿಯಾಗಿದ್ದ ಬಡಬ್ಯಾಕೂಡ್‌ನ ಮಹಾಂತೇಶ ಪೂಜಾರ್ (೨೩)ನನ್ನು ಬಂಧಿಸಲಾಗಿದೆ.
ಕೊಲೆಯಾದ ಅಕ್ಬರ್ ಹಾಗೂ ಹಂತಕ ಮಹಾಂತೇಶ ಇಬ್ಬರೂ ಸ್ನೇಹಿತರಾಗಿದ್ದರು,ಆರೋಪಿ ಮಹಾಂತೇಶ್ ಯುವತಿಯೊಬ್ಬಳ ಜೊತೆಗಿನ ಖಾಸಗಿ ವೀಡಿಯೋವನ್ನು ತನ್ನದೇ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಹಣಕಾಸಿನ ವೈಷಮ್ಯದ ವಿಚಾರಕ್ಕೆ ಆ ಮೊಬೈಲ್‌ನ್ನು ಅಕ್ಬರ್ ಕಸಿದುಕೊಂಡಿದ್ದು, ಆದರೆ ವೀಡಿಯೋ ಎಲ್ಲಿ ಬಹಿರಂಗವಾಗುತ್ತದೆಯೋ ಎಂದು ಮಹಾಂತೇಶ್ ಕೊಲೆ ಮಾಡಿದ್ದಾನೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಆರೋಪಿ ಮಹಾಂತೇಶನನ್ನು ಹಾರೂಗೇರಿ ಪೊಲೀಸರು ಬಂಧಿಸಿದ್ದಾರೆ.
ಮೃತ ಅಕ್ಬರ್ ಹಾಗೂ ಹಂತಕ ಮಹಾಂತೇಶ ಇಬ್ಬರೂ ಎಮ್ಮೆ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ಈ ಹಿಂದೆ ಇಬ್ಬರ ವಿರುದ್ಧವೂ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಒಂದು ವರ್ಷದಿಂದ ಇಬ್ಬರ ಮಧ್ಯೆ ಹಣಕಾಸು ವ್ಯವಹಾರದಲ್ಲಿ ಇಬ್ಬರ ನಡುವೆ ವೈಷಮ್ಯ ಮೂಡಿತ್ತು.
ಈ ವಿಚಾರವಾಗಿ ಸಮೀಪದ ಅರಣ್ಯಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿ ಹರಿತವಾದ ಆಯುಧರಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಪೊಲೀಸರು ಮೊಬೈಲ್ ಜಪ್ತಿ ಮಾಡಿದ್ದು, ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.