ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ಆಸಕ್ತಿ ಅಭ್ಯರ್ಥಿಗಳಲ್ಲಿರಲಿ

ಬಳ್ಳಾರಿ:ಡಿ.26- ಜಿಲ್ಲಾಡಳಿತ ಮತ್ತು ಬಳ್ಳಾರಿಜಿಲ್ಲಾ ಖನಿಜ ನಿಧಿ ಪ್ರತಿಷ್ಠಾನದಿಂದ ಇಂದು ನಗರದ ವಿಮ್ಸ್ ಸಭಾಂಗಣದಲ್ಲಿ‌ ಐಎಎಸ್, ಐಪಿಎಸ್ ಮತ್ತು ಬ್ಯಾಂಕಿಂಗ್​ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ. ಇದು ಸ್ಪರ್ಧಾತ್ಮಕ ಯುಗ. ಆಸಕ್ತಿ ಇರುವ ಅಭ್ಯರ್ಥಿಗಳು ನಿರಂತರ ಪರಿಶ್ರಮದಿಂದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅರಿತಿದ್ದರೆ ಎಂತಹ ಪರೀಕ್ಷೆಯನ್ನು ಎದುರಿಸಲು ಸಾಧ್ಯ. ಸತತ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದು ಅಭ್ಯರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಇನ್ ಸೈಟ್ಸ್ ಆನ್ ಇಂಡಿಯಾ ಸಂಸ್ಥೆಯ ಸಂಸ್ಥಾಪಕ ವಿನಯ್​, ಬಳ್ಳಾರಿ ಜಿಲ್ಲೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕೇಂದ್ರವಾಗಿ ಹೊರಹೊಮ್ಮಬೇಕು. ಅಂತಹ ಗುರಿಯನ್ನು ನಾವೆಲ್ಲರೂ ಇಟ್ಟುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗಿಯಾಗಬೇಕಾದರೆ ವಿದ್ಯಾರ್ಥಿಗಳು ಗಂಭೀರತೆ ಹಾಗೂ ವಿಶೇಷ ಆಸಕ್ತಿ ಹೊಂದಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಶಮಂತ್, ಪ್ರದೀಪ ಅವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದರ ಕುರಿತುಬದರ ಹಾಗೂ ಬ್ಯಾಂಕಿಂಗ್ ಪರೀಕ್ಷೆ ಕುರಿತು ತಿಳಿಸಿಕೊಟ್ಟರು.
ಎಸ್​ಪಿ ಸೈದುಲು ಅಡಾವತ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ವಿಮ್ಸ್ ನಿರ್ದೇಶಕ ಡಾ. ದೇವಾನಂದ, ಐಎಎಸ್ ಪ್ರೊಬೇಷನರ್ ರಾಹುಲ್ ಸಂಕನೂರ, ಬಳ್ಳಾರಿ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕಿ ಲಕ್ಷ್ಮೀ ಕಿರಣಿ ಇದ್ದರು.