ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯ- ಕೆ.ಅನಂತರಾಜ ನಾಯಕ

ಅರಕೇರಾ,ಜು.೨೩-ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳು ಬಹುತೇಕ ಕಡಿಮೆ ಅವಧಿಯಲ್ಲಿ ಅಧ್ಯಯನ ಮಾಡಿ ಹೆಚ್ಚಿನ ಅಂಕಗಳಿಸುವಂತಹ ಪ್ರತಿಭೆ ಹೊಂದಿರುತ್ತಾರೆ.ಅಂತಹ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮ ಪರೀಕ್ಷೆಯನ್ನು ಎದುರಿಸಲು ಸರಿಯಾದ ಮಾರ್ಗದರ್ಶನದ ಅಗತ್ಯವಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಅನಂತರಾಜ ನಾಯಕ ಸಲಹೆ ನೀಡಿದರು.
ಅವರು ಅರಕೇರಾ ಗ್ರಾಮದಲ್ಲಿನ ಶ್ರೀ ಸಿದ್ದಯ್ಯ ಹವಾಲ್ದಾರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೭೫ ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗೆಳೆಯರ ಬಳಗ ಮಲದಕಲ್ ಹಾಗೂ ಜ್ಞಾನವೃಕ್ಷ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ದೇವದುರ್ಗ ಇವರ ವತಿಯಿಂದ ಹಮ್ಮಿಕೊಂಡಿದ್ದ ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ಸೇರಿದಂತೆ ಇನ್ನಿತರ ಹುದ್ದೆಗಳನ್ನು ಪಡೆಯಲು ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳು ಹಾಗೂ ಸಾಮಾನ್ಯ ಜ್ಞಾನದ ಅಗತ್ಯವಿದೆ ಹೀಗಾಗಿ ವಿದ್ಯಾರ್ಥಿಗಳು ಕಾಲೇಜು ಅಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿಬೇಕು ಎಂದರು.
ನಂತರ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತುದಾರ ನಾಗರಾಜ ಪೂಜಾರಿ ಮಾತನಾಡಿದರು, ವಿದ್ಯಾರ್ಥಿಗಳು ಮೋಬೈಲ್ ಅನ್ನು ಮಂತ್ರವನ್ನು ಬಿಟ್ಟು ಅಭ್ಯಾಸ ಎನ್ನುವ ತಂತ್ರದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಈ ವೇಳೆ ನಿವೃತ್ತ ಮುಖ್ಯ ಗುರು ಮುದುಕಪ್ಪ ನಾಯಕ, ಎಸ್ಡಿಎಂಸಿ ಅಧ್ಯಕ್ಷ ಸೂಗೂರೇಶ್ವರ ಎಸ್.ಗುಡಿ, ನಾಗರಾಜ ನಾಯಕ ಕರ್ನಾಳ್, ಅರಣ್ಯ ಇಲಾಖೆ ಅಧಿಕಾರಿ ಎಂ.ಡಿ.ಬಾವಸ್ ಅಲೀ, ಪ್ರಾಚಾರ್ಯರಾದ ಹನುಮಂತಪ್ಪ ಚನ್ನೂರು ಹಾಗೂ ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ನಿರೂಪಣೆ: ಶಶಿಕಲಾ ಉಪನ್ಯಾಸಕರು ಸ್ವಾಗತಿಸಿಕೊನೆಯಲ್ಲಿ ಬುದ್ದಿವಂತಿಉಪನ್ಯಾಸಕರು ವಂದಿಸಿದರು.