ಸ್ಪರ್ಧಾ ಯಶಸ್ಸಿಗೆ ಮುಂದಾಗಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ಜ,13-  ವಿದ್ಯಾರ್ಥಿಗಳು ಏಕಾಗ್ರತೆ ಬೆಳೆಸಿಕೊಂಡು ಸ್ಪರ್ಧಾತ್ಮಕ ಮನೋಭಾವದಿಂದ ಓದಿ ಮುಂದಿನ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಆಯ್ಕೆಯಾಗಬೇಂದು ಮುಖ್ಯಗುರು ರವಿಚೇಳ್ಳಗುರ್ಕಿ ಎಂಟನೇ ತರಗತಿ ಮಕ್ಕಳಿಗೆ ಹೇಳಿದರು.
ಅವರು ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾ ಯಶಸ್ಸು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
 ಈ ವರ್ಷ ಮಕ್ಕಳ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರತಿ ಶಾಲೆಗೆ ಸ್ಪರ್ಧಾ ಯಶಸ್ಸು-2022 ಎನ್ನುವ ಅಭ್ಯಾಸ ಕೈಪಿಡಿಯನ್ನು ಉಚಿತವಾಗಿ ವಿತರಣೆ ಮಾಡಿದೆ.ಇದರ ಸದುಪಯೋಗ ಆಗಬೇಕು. ಆ ನಿಟ್ಟಿನಲ್ಲಿ ಶಿಕ್ಷಕರು ತರಗತಿಯಲ್ಲಿ ಮಾರ್ಗದರ್ಶನ ಮಾಡಬೇಕು. ಹೆಚ್ಚು ಹೆಚ್ಚು ಮಕ್ಕಳು ಆಯ್ಕೆಯಾಗುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದರು.
ತರಗತಿ ಶಿಕ್ಷಕ ಮುನಾವರ ಸುಲ್ತಾನ, ದಿಲ್ಷಾದ್ ಬೇಗಂ,ಶ್ವೇತಾ,ಶಶಮ್ಮ ವಿದ್ಯಾರ್ಥಿ ಪ್ರತಿನಿಧಿ ಸುಂಕಮ್ಮ ಮುಂತಾದವರು ಉಪಸ್ಥಿತರಿದ್ದರು.