ಸ್ಪರ್ಧೆಗಳ ಉದ್ಘಾಟನೆ


ಬಾದಾಮಿ,ನ.24: ಪ್ರಜಾಪ್ರಭುತ್ವದಲ್ಲಿ ಮತದಾನ ಪದ್ಧತಿಯಲ್ಲಿ ಎಲ್ಲರೂ ಮತದಾನ ಮಾಡಬೇಕು. ಇದಕ್ಕಾಗಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರತಿಯೊಬ್ಬರು ಜಾಗೃತಿ ಮೂಡಿಸಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಹನಮಂತರಾಜು ಹೇಳಿದರು.
ಅವರು ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ತಾಲೂಕಾಮಟ್ಟದ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯ ಶಾಲೆಯ ಮುಖ್ಯಶಿಕ್ಷಕ ಬಿ.ಎಸ್.ಕರಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಎಂ.ಮಳಜಿ, ಬಿ.ಎಸ್.ಕುಂಬಾರ, ಎಸ್.ಪಿ.ಜಾಲಿಹಾಳ, ಕಲಾದಗಿ, ಜಯಪ್ರಕಾಶ ಹಾಜರಿದ್ದರು. ಬಿ.ಆರ್.ಚಿಕ್ಕಣ್ಣವರ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.