ಸ್ಪೀಕರ್ ವಿರುದ್ದ ವಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ

ಬೆಂಗಳೂರು, ಜು.19 -ವಿಧಾನಸಭಾಧ್ಯಕ್ಷ ಯುಟಿ ಖಾದರ್ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ನಿರ್ಧರಿಸಿವೆ.
ಬಿಜೆಪಿಯವ10 ಶಾಸಕರನ್ನು ಸದನದಿಂದ ಅಮಾನತು ಮಾಡಿರುವ ಬೆನ್ನಲ್ಲೇ ವಿಪಕ್ಷಗಳು ಈ ನಿರ್ಧಾರ ಕೈಗೊಂಡಿವೆ.
ವಿಧಾನಸಭಾಧ್ಯಕ್ಷ ಯು ಟಿ ಖಾದರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸ್ತಾವವನ್ನ ಜೆಡಿಎಸ್ ಮತ್ತು ಬಿಜೆಪಿ ವಿಧಾನಸಭೆಯ ಕಾರ್ಯದರ್ಶಿ, ವಿಶಾಲಾಕ್ಷಿ ಅವರಿಗೆ ಪತ್ರ ಮುಖೇನ ಸಲ್ಲಿಸಿದೆ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನ ಶಾಸಕರುಗಳು ಸಹಿ ಮಾಡಿದ್ದಾರೆ. ವಿಧಾನಸಭೆಯ ಅಧ್ಯಕ್ಷರಾಗಿ ಶಾಸಕರುಗಳಿಂದ ಆಯ್ಕೆಯಾಗಿರುವ ಯು ಟಿ ಖಾದರ್ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪ ಇದಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.