ಸ್ಪೋಟಕ ಸಿಡಿದು ಮೂವರ ಸಾವು

ಹಾಸನ,ಏ4-ಸ್ಫೋಟಕ ವಸ್ತುಗಳಿಂದಾಗಿ ರಾಜ್ಯದಲ್ಲಿ ಎಷ್ಟೆಲ್ಲ ಅನಾಹುತ ಸಂಭವಿಸಿದರೂ ಜನ, ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಫೋಟಕ ಸಿಡಿದು ಮೂವರು ಸಾವನ್ನಪ್ಪಿದ್ದಾರೆ.

ಚಾಕೇನಹಳ್ಳಿಕಟ್ಟೆ ಸುತ್ತ ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಆದರೂ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು. ಇಂದು ಜಿಲೆಟಿನ್ ರೀತಿಯ ವಸ್ತು ಸ್ಫೋಟಗೊಂಡು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಿಲೆಟಿನ್ ಕಡ್ಡಿ ಸ್ಪೋಟಗೊಂಡು ಹಲವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲಿ ಮತ್ತೊಂದು ಘಟನೆ ಸಂಭವಿಸಿದೆ.