ಸ್ಮರಣ ಸಂಚಿಕೆ ಬಿಡುಗಡೆ

ಬೀದರ್: ನ.11:ವಿಕ್ರಮ್ ಪ್ರಕಾಶನ ಹೊರ ತಂದಿರುವ ಕರುನಾಡ ಶಿಖರ ಕಲ್ಯಾಣ ಕರ್ನಾಟಕ ಸ್ಮರಣ ಸಂಚಿಕೆಯನ್ನು ಇಲ್ಲಿಯ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.
ಹುಲಸೂರಿನ ಶಿವಾನಂದ ಸ್ವಾಮೀಜಿ ಬಿಡುಗಡೆ ಮಾಡಿದರು. ಸ್ಮರಣ ಸಂಚಿಕೆಯು ಕಲ್ಯಾಣ ಕರ್ನಾಟಕದ ಸಮಗ್ರ ಇತಿಹಾಸವನ್ನು ಒಳಗೊಂಡಿದೆ ಎಂದು ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.
ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಗೌರವ ಕಾರ್ಯದರ್ಶಿಗಳಾದ ಶಿವಕುಮಾರ ಕಟ್ಟೆ, ಶಿವಶಂಕರ ಟೋಕರೆ, ಬಸವಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಸಾಹಿತಿ ಬಸವರಾಜ ಬಲ್ಲೂರ, ಪ್ರಮುಖರಾದ ವಿಜಯಕುಮಾರ ಸೋನಾರೆ, ರಜಿಯಾ ಬಳಬಟ್ಟಿ, ಮಲ್ಲಮ್ಮ ಆರ್. ಪಾಟೀಲ, ರೂಪಾ ಪಾಟೀಲ, ಚನ್ನಬಸವ ಹೇಡೆ, ಬಾಬುರಾವ್ ದಾನಿ ಇದ್ದರು.