ಸ್ಮಶಾನದಲ್ಲಿ ವ್ಯಕ್ತಿ ನೇಣಿಗೆ ಶರಣು

ಕೂಡ್ಲಿಗಿ.ಅ.29:-ಮಾನಸಿಕ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಸ್ಮಶಾನದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಸಮೀಪದ ರಂಗನಾಥನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಜರುಗಿದೆ. ಮೃತ ವ್ಯಕ್ತಿ ಬಸವರಾಜ(35) ಎಂಬುವನಾಗಿದ್ದಾನೆ. ಕಳೆದ ಎರಡು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅಲ್ಲದೆ ಆತನನ್ನು ಈ ಸಂಬಂದ ಬೆಂಗಳೂರು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿತ್ತಾದರೂ ಗುಣಮುಖವಾಗದ ಕಾರಣ ಮಾನಸಿಕವಾಗಿ ನೊಂದು ಮಂಗಳವಾರ ರಾತ್ರಿ ಗ್ರಾಮದ ಸ್ಮಶಾನಕ್ಕೆ ತೆರಳಿ ತನ್ನ ಲುಂಗಿಯಿಂದಲೇ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ಈ ಸಂಬಂದ ಮೃತನ ತಾಯಿ ಬಸಮ್ಮ ನೀಡಿದ ದೂರಿನಂತೆ ಬುಧವಾರ ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.