ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಪರಿಸರ ದಿನ

ದಾವಣಗೆರೆ.ಜೂ.೫; ನಗರದ ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ವಿಶ್ವ ಪರಿಸರ ದಿನವನ್ನು ಸ್ಮಾರ್ಟ್ ಸಿಟಿ ಕಛೇರಿ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಸರಳವಾಗಿ ಆಚರಿಸಲಾಯಿತು.ನಂತರ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ  ರವೀಂದ್ರ ಬಿ. ಮಲ್ಲಾಪುರ  1973 ರಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವೆಂದು ಆಚರಿಸಲಾಗುತ್ತಿದ್ದು, ಪರಿಸರ ಕ್ಷೀಣಿಸುತ್ತಿರುವ ಸ್ಥಿತಿಯ ಬಗ್ಗೆ ಜಾಗತಿಕ ಜಾಗೃತಿ ಮೂಡಿಸಲು ಮತ್ತು ಜನರಿಗೆ ಅದರ ಬಗ್ಗೆ ತಿಳಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದು ವಿಶ್ವ ಪರಿಸರ ದಿನದ ಮಹತ್ವವನ್ನು ತಿಳಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ  ಎಂ. ಸತೀಶ್, ಪ್ರಧಾನ ವ್ಯವಸ್ಥಾಪಕರಾದ ಎಸ್. ಕೆ. ಚಂದ್ರಶೇಖರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.