ಸ್ಯಾಂಟ್ರೋರವಿ ಸೆರೆ ಊಹಾಪೋಹಗಳಿಗೆ ತೆರೆ:ಗೃಹ ಸಚಿವ ಆರಗ

ಬೆಂಗಳೂರು,ಜ.13-ವಂಚಕ ಎನ್ನಲಾದ, ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ, ರಾಜ್ಯ ಪೊಲೀಸರು ಯಶಸ್ವಿಯಾಗಿದ್ದು,ಆತನ ಬಂಧನದಿಂದ ಎಲ್ಲಾ ಊಹಾ ಪೋಹಗಳಿಗೆ ತೆರೆ ಬಿದ್ದಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಕಳೆದ ಹನ್ನೊಂದು ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿ ಕೊಳ್ಳುತ್ತಿದ್ದ, ಸ್ಯಾಂಟ್ರೋ ರವಿಯನ್ನು ಆತನ ವಿರುದ್ಧ ಇರುವ ಆರೋಪಗಳ ಬಗ್ಗೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ತಪ್ಪಿಸ್ಥಸ್ಥನಾಗಿದ್ದರೆ ಆತನ ಸೂಕ್ತ ಕಾನೂನು ಕ್ರಮ ಜರುಗಿಸಿ ಸಂತ್ರಸ್ತ ವ್ಯಕ್ತಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸುತ್ತಾರೆ ಎ ಹೇಳಿಕೆಯಲ್ಲಿ ತಿಳಿಸಿದ್ದಾರೆ.