ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಶಾಸಕ ಒತ್ತಾಯ

ರಾಯಚೂರು, ಜ.೧೪- ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು.
ಅವರಿಂದು ನಗರದ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ತಲೆ ಮರೆಸಿಕೊಂಡಿದ್ದ ಅತ್ಯಾಚಾರ, ವೇಶ್ಯಾವಾಟಿಕೆ, ಗೂಂಡಾ ಪ್ರಕರಣಗಳ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿಯನ್ನು ಪೊಲೀಸರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಶುಕ್ರವಾರ ಬಂಧಿಸಿದ್ದಾರೆ.
ಸಂಟ್ರೋ ರವಿ ಪ್ರಕರಣದಲ್ಲಿ ಯಾವುದೇ ಪಕ್ಷದ ಕಾರ್ಯಕರ್ತ ಇದ್ದರು ಅಂತವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಅಧಿಕಾರಿಗಳು ಶಾಮಿಲಿಯಾಗಿದ್ದರು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ಒಳಪಡಿಸಿಬೇಕು ಎಂದರು.ಇಂತಹ ವ್ಯವಸ್ಥೆಯಿಂದ ಪ್ರಜಾಪ್ರಭುತ್ವ ಮಾರಕವಾಗುತ್ತದೆ. ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.