ಸ್ಲಂ ಜನಾಂದೊಲನದಿಂದ ಪ್ರತಿಭಟನೆ

ದಾವಣಗೆರೆ. ಮೇ.೨೨: ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಮತ್ತು ಸ್ಲಂ ನಿವಾಸಿಗಳಿಗೆ ಲಾಕ್‌ಡೌನ್ ಆರ್ಥಿಕ ಪರಿಹಾರವಾಗಿ ಮೂರು ತಿಂಗಳು ತಲಾ 10 ಸಾವಿರ ಭತ್ಯೆ ಘೋಷಿಸಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಸದಸ್ಯರು ಮನೆ ಮನೆಯಿಂದಲೇ ಪ್ರತಿಭಟನೆ ನಡೆಸಿದ್ದಾರೆ.ಕೋವಿಡ್ 2ನೇ ಅಲೆ 1250 ಆರ್ಥಿಕ ಪರಿಹಾರ ಪ್ಯಾಕೇಜ್‌ನಲ್ಲಿ ಸ್ಲಂ ನಿವಾಸಿಗಳ ನಿರ್ಲಕ್ಷ್ಯ ಮಾಡಲಾಗಿದೆ. ಎಲ್ಲಾ ಬಿ.ಪಿ.ಎಲ್ ಕುಟುಂಬಗಳಿಗೆ 10 ಸಾವಿರ ಲಾಕ್‌ಡೌನ್ ಭತ್ಯೆ, ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ಮತ್ತು ಎಲ್ಲಾ ನಾಗರೀಕರಿಗೆ ಉಚಿತ ಲಸಿಕೆ ನೀಡಬೇಕು.ಸ್ಲಂ ನಿವಾಸಿಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರದ ಮಾನದಂಡದಂತೆ ಮೂರು ತಿಂಗಳು ೧೦ ಕೆ.ಜಿಯಂತೆ ಅಗತ್ಯ ವಸ್ತುಗಳನ್ನು ನೀಡಬೇಕು.ರಾಜ್ಯ ಎಲ್ಲಾ ನಾಗರೀಕರಿಗೂ ಉಚಿತ ಲಸಿಕೆ ನೀಡಬೇಕು ಮತ್ತು ಮನೆ ಮನೆಗೆ ಲಸಿಕೆ ಅಭಿಯಾನ ಪ್ರಾರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಎ.ನರಸಿಂಹಮೂರ್ತಿ ಹಾಗೂ ರೇಣುಕಾಯಲ್ಲಮ್ಮ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿದ್ದರು.