
ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 16: ಜಿಲ್ಲೆಯ ಎಲ್ಲಾ 122 ಗ್ರಾಮ ಪಂಚಾಯತಿಗಳು ಹಾಗೂ ಎಲ್ಲ ಗ್ರಾಮಗಳಲ್ಲಿ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆ0iÉ?? ಸೇವೆ ಎಂಬ ವಿಶೇಷ ಜನಾಂದೋಲನವನ್ನು ಸೆ.15 ರಿಂದ ಅ.2ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ವೈಶಾಲಿ ಎಂ.ಎಲ್. ಅವರು ತಿಳಿಸಿದ್ದಾರೆ.
ಈ ಕುರಿತು, ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಹಾತ್ಮರ ಧ್ಯೇಯ ವಾಕ್ಯ ಸ್ವಚ್ಛತೆ0iÉ?? ದೈವತ್ವ ಎಂಬ ಕನಸನ್ನು ನನಸಾಗಿಸಲು ಸೆ.15 ರಿಂದ ಅ.2ರ ವರೆಗೆ 15 ದಿನಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಸ್ಚಚ್ಛತೆ0iÉ?? ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ. ಈ ವರ್ಷದ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆ0iÉ?? ಸೇವೆ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ಕಸ ಮುಕ್ತ, ತ್ಯಾಜ್ಯ ಮುಕ್ತ ಭಾರತ ಎಂದು ಘೋಷಿಸಲಾಗಿದ್ದು, ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದೆ.
ಕಳೆದ ವರ್ಷಗಳಂತೆ0iÉ?? ಗ್ರಾಮಗಳ ಸ್ವಚ್ಛತೆಗೆ ಸ್ವಯಂಪ್ರೇರಿತರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವುದು. ಜಿಲ್ಲೆಯ ತಾಲೂಕ, ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹೆಚ್ಚು ಜನಜಂಗುಳಿಯಿರುವ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು ಮತ್ತು ನಾಲಾಗಳು, ಸಾರ್ವಜನಿಕ ಸ್ಥಳಗಳಾದ ಶಾಲೆ, ಅಂಗನವಾಡಿ, ಗ್ರಂಥಾಲಯ. ದೇವಸ್ಥಾನ ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮತ್ತು ದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಸ್ವಚ್ಛತಾ ಹಿ ಸೇವಾ, ಸ್ವಚ್ಛತೆ0iÉ?? ಸೇವೆ , ಸಫಾಯಿ ಮಿತ್ರ ಸುರಕ್ಷ ಶಿಬಿರ ಈ ನಿಟ್ಟಿನಲ್ಲಿ ಎಲ್ಲಾ ಸಂಬಂಧಿತ ಪಾಲುದಾರರೊಂದಿಗೆ ತಮ್ಮ ಹಂತದಲ್ಲಿ ಸಭೆಯನ್ನು ವಿವಿಧ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ತಿಳಿಸಿ ಮತ್ತು ಸ್ವಚ್ಛತಾ ಹಿ ಸೇವಾ, ಸ್ವಚ್ಛತೆ0iÉ?? ಸೇವೆಯಲ್ಲಿ ಉತ್ತಮ ಯಶಸ್ಸುಗಳಿಸುವ ಉದ್ದೇಶದಿಂದ ಸದೃಢ ಭಾರತ ನಿರ್ಮಾಣಕ್ಕೆ ಗ್ರಾಮ, ಗ್ರಾಮ ಪಂಚಾಯತಿ, ತಾಲೂಕು ಹಾಗೂ ಜಿಲ್ಲೆಯ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ( ಫೆÇೀಟೋ ಲಗತ್ತಿಸಿದೆ )