ಬೀದರ್:ಅ.20: ತಾಲ್ಲೂಕಿನ ನಾಗೋರಾದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಯಾಕತಪುರ ಅವರು ಸ್ವಚ್ಛತಾ ಕಾರ್ಮಿಕರಿಗೆ ಉಚಿತ ಸಮವಸ್ತ್ರ ಹಾಗೂ ಸುರಕ್ಷತಾ ಸಾಮಗ್ರಿ ವಿತರಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಸ್ವಚ್ಛತಾ ಕಾರ್ಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಹೀಗಾಗಿ ಪಂಚಾಯಿತಿ ಸ್ವಚ್ಛತಾ ಕಾರ್ಮಿಕರಿಗೆ ವೈಯಕ್ತಿಕವಾಗಿ ಉಚಿತ ಸಮವಸ್ತ್ರ ಹಾಗೂ ಸುರಕ್ಷತಾ ಸಾಮಗ್ರಿ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಫೂಲಮ್ಮ ಸುಮಂತ್, ಪಿಡಿಒ ವಿಜಯಕುಮಾರ, ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.