ಸ್ವಚ್ಛತಾ ಜಾಗೃತಿ ಕಾರ್ಯಕ್ರಮ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಮೇ.24: ಸಮುದಾಯದ ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಿಂದಲೇ ಸ್ವಚ್ಛತೆಗೆ ಆದ್ಯತೆ ನೀಡಿದರೆ ರೋಗ ರುಜಿನಗಳ ಹರಡುವಿಕೆ ತಡೆಗಟ್ಟಿ ಪರಿಸರ ಸಂರಕ್ಷಣೆ ಮಾಡಬಹುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ ತಿಳಿಸಿದರು.
 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ತಾಲೂಕು ಪಂಚಾಯತ್‌ನ ಕಚೇರಿಯ ವತಿಯಿಂದ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
 ತಾಲ್ಲೂಕಿನ ನಡವಿ ಗ್ರಾಮ ಹಾಗೂ ಕುರುವಳ್ಳಿ ಗ್ರಾಮಗಳಲ್ಲಿ ಸರ್ಕಾರಿ ಕಟ್ಟಡಗಳು ಹಾಗೂ ಸರ್ಕಾರಿ ಶಾಲೆಗಳು ಮತ್ತು ರಸ್ತೆಗಳನ್ನು ಸ್ವಚ್ಚತೆಯನ್ನು ಮಾಡಿದರು ಮತ್ತು ವಾಹನದ ಮೂಲಕ ಸ್ವಚ್ಚತಾ ಹರಿವು ಮೂಡಿಸುವ ಕಾರ್ಯಕ್ರಮವನ್ನು ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಂಚರಿ ಶೌಚಾಲಯ ಬಳಕೆ ಮಹತ್ವ, ಹಸಿ ಕಸ, ಒಣ ಕಸ ವಿಂಗಡಣೆ  ಜಾಗೃತಿ ಮೂಡಿಸಲಾಯಿತು.
 ಸ್ವಚ್ಛತೆ ಕುರಿತ ಅಯಾ ಗ್ರಾಮಗಳ ಗ್ರಾಮ ಪಂಚಾಯತಿ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮೂಲಕ ಮಾಹಿತಿ ನೀಡುತ್ತಾರೆ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಈ ಕಾರ್ಯಕ್ರಮವನ್ನು  ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯತಿ ಅಧಿಕಾರಿಗಳು  ತಿಳಿಸಿದರು.