ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ನಾಗೀಂದ್ರಪ್ಪ ಪೂಜಾರಿ ನಾಮಪತ್ರ ಸಲ್ಲಿಕೆ

ಕಲಬುರಗಿ,ಏ.16-ಕಾಂಗ್ರೆಸ್ ಪಕ್ಷ ಟಿಕೆಟ್ ಹಂಚಿಕೆಯಲ್ಲಿ ಕುರುಬ ಸಮುದಾಯವನ್ನು ಕಡೆಗಣಿಸಿದೆ. ಹೀಗಾಗಿ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಲು ನಿರ್ಧರಿಸಿದ್ದೇನೆ. 17 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕುರುಬ ಸಮಾಜದ ಜಿಲ್ಲಾ ಉಪಾಧ್ಯಕ್ಷರೂ ಆದ ನ್ಯಾಯವಾದಿ ನಾಗೀಂದ್ರಪ್ಪ ಪೂಜಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕುರುಬ ಸಮಾಜದ ಜನಸಂಖ್ಯೆ 2.87 ಲಕ್ಷಕ್ಕೂ ಅಧಿಕವಾಗಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಸಮಾಜದ ಮತಗಳು ನಿರ್ಣಾಯಕವಾಗಿವೆ ಎಂದು ತಿಳಿಸಿದ್ದಾರೆ.