ಸ್ವತಂತ್ರ ಪತ್ರಿಕಾ ಮಾಧ್ಯಮ ಅಗತ್ಯ: ಸುಪ್ರೀಂ

ನವದೆಹಲಿ,ಏ.೫- ಸಮಾಜದ ಕಾರ್ಯಚಟುವಟಿಕೆಗೆ “ಸ್ವತಂತ್ರ ಪತ್ರಿಕಾ ಮಾಧ್ಯಮ” ದೇಶದಲ್ಲಿ ಅತಿ ಮುಖ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದಿಲ್ಲಿ ಮಹತ್ವದ ತೀರ್ಪು ನೀಡಿದೆ.
ಮಾಧ್ಯಮದ ಸ್ವಾತಂತ್ರ್ಯದ ಮೇಲೆ ಪರಿಣಾಮವನ್ನು ಬೀರುವುದರಿಂದ ಪತ್ರಿಕಾ ಮೇಲೆ ಅವಿವೇಕದ ನಿರ್ಬಂಧಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವಿರುದ್ದ ನ್ಯಾಯಪೀಠ ಚಾಟಿ ಬೀಸಿದೆ.
ಕೇರಳ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ ಮಲೆಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್‌ನ ಮನವಿ ಹಿನ್ನೆಲೆಯಲ್ಲಿ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಸುಪ್ರೀಂ ರದ್ದು
ಮಲಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್‌ಗೆ ಭದ್ರತಾ ಅನುಮತಿ ನೀಡಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿಷೇಧ ಮಾಡಿದ ಕ್ರಮವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ರಾಷ್ಟ್ರೀಯ ಭದ್ರತೆಯ ಕಾಳಜಿಯನ್ನು ವಸ್ತುನಿಷ್ಠ ಸಾಮಗ್ರಿಗಳಿಲ್ಲದೆ ಇಲ್ಲಿ ಎತ್ತಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ಸುದ್ದಿ ವಾಹಿನಿಯ ಪರವಾನಗಿಯನ್ನು ಹಿಂತೆಗೆದುಕೊಳ್ಳುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೀಡಿಯಾ ಒನ್‌ನ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿದೆ.