ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ್

ಮೈಸೂರು,ಅ.29- ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು.
ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಅವರ ಸ್ವಯಂ ನಿವೃತ್ತಿ ಹಿನ್ನೆಲೆಯಲ್ಲಿ ಗುರುವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಸಮಾರಂಭದಲ್ಲಿ ಮಾತನಾಡಿದ ಅವರು ಬೆಂಗಳೂರಿಗಿಂತ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚು ಕೆಲಸ ಮಾಡಿದ್ದೇನೆ. ಅದು ಖುಷಿಕೊಟ್ಟಿದೆ.
ಮೈಸೂರಿನಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ್ದೇನೆ. ಆ ಅವಧಿಯಲ್ಲಿ ಮೊದಲ ದಸರಾ ಮಹೋತ್ಸವ ಅತ್ಯಂತ ಸವಾಲಿನದ್ದಾಗಿತ್ತು. ಅದರ ಅನುಭವ ಮುಂದಿನ ದಸರಾಗಳಿಗೆ ನೆರವಾಯಿತು. ಮೈಸೂರಿನಲ್ಲಿ ಕೆಲಸ ಮಾಡಿದ್ದು ಹೆಚ್ಚು ಖುಷಿಕೊಟ್ಟಿದೆ. ಮೈಸೂರಿನಲ್ಲಿ ಅಪಾರ ಸಂಖ್ಯೆಯಲ್ಲಿ ಸ್ನೇಹಿತರಾಗಿದ್ದಾರೆ ಎಂದು ನೆ‌ನಪಿಸಿಕೊಂಡರು.
ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್, ಹಲವಾರು ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.