ಸ್ವಯಂ ಪ್ರೇರಿತರಾಗಿ ಪ್ರತಿಯೊಬ್ಬರು ಭಾಗವಹಿಸಿ ಕೊರೊನಾ ಜಾಗೃತಿ ಮೂಡಿಸಿ

ಸಿರುಗುಪ್ಪ, ಮೇ.18: ಕೊರೊನಾ ನಿಯಂತ್ರಣ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಮಟ್ಟದ ಕೊವೀಡ್ – ೧೯ ಟಾಸ್ಕ್ ‌ಪೋರ್ಸ್ ಸಮಿತಿ ರಚನೆ ಮಾಡಲಾಗಿದ್ದು, ಇದರಲ್ಲಿ ಸ್ವಯಂ ಪ್ರೇರಿತರಾಗಿ ಪ್ರತಿಯೊಬ್ಬರು ಭಾಗವಹಿಸಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಶಾನವಾಸಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀರೇಶಪ್ಪ ಅವರು ಹೇಳಿದರು.
ತಾಲೂಕಿನ ದರೂರು ಗ್ರಾಮದಲ್ಲಿರುವ ಶ್ರೀವೀರಭದ್ರೆಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆ ಹಾಗೂ ಗ್ರಾಮ ಮಟ್ಟದ ಕೊರೋನಾ ಟಾಸ್ಕ್ ಪೊರ್ಸ್ ಸಮಿತಿ ರಚಿಸಿದ ನಂತರ ಅವರು ಮಾತನಾಡಿದರು.
ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿರುವ ನಾವೇಲ್ ಕೊರೋನಾ ವೈರಾಣು ತಡೆಗಟ್ಟುವ ಸಲುವಾಗಿ ಗ್ರಾಮದ ಕುಟುಂಬ ಆರೋಗ್ಯ ಸಮೀಕ್ಷೆ ಮಾಡಲಾಗುತ್ತದೆ. ಸಮಾಜ ಸೇವ ಮಾಡಬೇಕು ಎನ್ನುವ ಉದ್ದೇಶ ಹೊಂದಿರುವ ಯುವಕರು ಸ್ವಯಂಸೇವಕರಾಗಿ ಕೊರೋನಾ ಕುರಿತು ಜಾಗೃತಿ ಮೂಡಿಸಲು ಮುಂದೆ ಬರಬೇಕು ಎಂದು ಕರೆ ನೀಡಿದರು.
ಗ್ರಾಮ ಮಟ್ಟದ ಕೊವೀಡ್ ಟಾಸ್ಕ್ ಪೋರ್ಸ್ ಸಮಿತಿ ಜೊತೆಗೆ ಸ್ವಯಂ ಸೇವಕರು ಸೇರಿ ಪ್ರತಿ ೫೦ ಮನೆಗಳ ಸಮೀಕ್ಷೆ ಮಾಡಬೇಕು. ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ದರೂರು, ಶಾನವಾಶಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಪ್ರಭಾವತಿ, ಗ್ರಾಪಂ ಸದಸ್ಯ ಎಲ್.ರುದ್ರುಮುನಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀಕಾಂತ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ದರೂರು ಗ್ರಾಮ ಲೆಕ್ಕಾಧಿಕಾರಿ ಕೆಂಚಪ್ಪ ಸ್ವಾಗತಿಸಿ, ವಂದಿಸಿದರು, ಗ್ರಾಪಂ ಸದಸ್ಯರುಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಊರಿನ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.